ತುಮಕೂರು : ಅಕ್ರಮವಾಗಿ ಗಾಂಜಾ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಸರಿ ಹಿಡಿಯುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೀರದೇನಹಳ್ಳಿ ಎಂಬಲ್ಲಿ ಗಾಜಾ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಇದೀಗ ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಹೌದು ಗಾಂಜಾ ಮಾರುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದರೆ. ಬೀರದೇನಹಳ್ಳಿ ಬಸ್ ನಿಲ್ದಾಣದಲ್ಲಿ ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ. ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಬೀರದೇನಹಳ್ಳಿಯಲ್ಲಿ ಸಿದ್ದರಬೆಟ್ಟದ ಹೇಮಂತ್ ಹಾಗೂ ನೇಗಲಾಲದ ಭೀಮರಾಜು ಎನ್ನುವ ಆರೋಪಿಗಳನ್ನು ಸೆರೆ ಹಿಡಿಯಲಾಗಿದೆ. ಸುಮಾರು 1.50 ಲಕ್ಷ ಮೌಲ್ಯದ 2 ಕೆಜಿ 400 ಗ್ರಾಂ ಗಾಂಜಾ ಸೊಪ್ಪು ಅನ್ನು ಜಪ್ತಿ ಮಾಡಿಕೊಳ್ಳಲಾಗಿದೆ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.