ಶಿವಮೊಗ್ಗ : ಕಳೆದ ಕೆಲವು ದಿನಗಳ ಹಿಂದೆ ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿತ್ತು. ಈ ಹಿನ್ನೆಲೆಯಲ್ಲಿ, ಬಿಜೆಪಿ ರಾಜ್ಯ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್ವಾಲ್ ಅವರು, ರಾಜಕ್ಕೆ ಭೇಟಿ ನೀಡಿ ಬಣ ಬಡಿದಾಟ ತಣ್ಣಗಾಗಿಸಿದ್ದರು. ಇದೀಗ ಮತ್ತೆ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಕೂಗು ಎದ್ದಿದ್ದು, ಬಿಜೆಪಿಯ ಮಾಜಿ ಸಚಿವ ಕುಮಾರ್ ಬಂಗಾರಪ್ಪ ಜನವರಿಯಲ್ಲಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.
ಹೌದು ಈ ವಿಚಾರವಾಗಿ ಶಿವಮೊಗ್ಗದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ ಎಂದು ಹೇಳಿದ್ದೇನೆ. ಕಳೆದ 30 ವರ್ಷಗಳಿಂದ ನಾನು ರಾಜಕಾರಣದಲ್ಲಿ ಇದ್ದೇನೆ. ಓಬಿಸಿ ಸಮುದಾಯಕ್ಕೆ ಆದ್ಯತೆ ನೀಡಿದರೆ ನನ್ನ ಪರಿಗಣಿಸಿ ಎಂದಿದ್ದೇನೆ. ಜನವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬದಲಾಗಬಹುದೆಂಬ ನಿರೀಕ್ಷೆ ಇದೆ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದರು.
ಪಕ್ಷದಲ್ಲಿನ ಭಿನ್ನಮತದ ಬಗ್ಗೆ ವರಿಷ್ಠರು ಗಮನಹರಿಸಿದ್ದಾರೆ ವೇಗವಾಗಿ ಪಕ್ಷದ ಹೈಕಮಾಂಡ್ ತೀಕ್ಷಣವಾದಂತಹ ನಿರ್ಧಾರ ಕೈಗೊಳ್ಳುತ್ತದೆ ರೇಣುಕಾಚಾರ್ಯ ತಂಡ ಸಭೆ ನಡೆಸುತ್ತಿರುವುದು ನನಗೆ ಗೊತ್ತಿಲ್ಲ. ಹಾಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನನ್ನನ್ನು ಪರಿಗಣಿಸಿ ಎಂದು ವರಿಷ್ಠರಿಗೆ ತಿಳಿಸಿದ್ದೇನೆ. ಬಹುಶಹ ಜನೆವರಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾಗುವಂತಹ ನಿರೀಕ್ಷೆ ಇದೆ ಎಂದು ಶಿವಮೊಗ್ಗದಲ್ಲಿ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ತಿಳಿಸಿದರು.