ಬೆಂಗಳೂರು : ಇತ್ತೀಚಿಗೆ ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ತೀವ್ರ ಹೆಚ್ಚಾಗಿದ್ದು, ಇದೀಗ ಮೊಬೈಲ್ ಕಳ್ಳತನ ಮಾಡಿ ಪರಾರಿ ಆಗಲು ಯತ್ನಿಸಿದ್ದ ಇಬ್ಬರೂ ಕಳ್ಳರನ್ನು ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಅವರು ಚೇಸಿಂಗ್ ಮಾಡಿ ದಿಗಳು ಹಿಡಿಸಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ಬಳಿ ನಡೆದಿದೆ.
ಹೌದು ಬೆಂಗಳೂರಿನಲ್ಲಿ ಮೊಬೈಲ್ ಕಳ್ಳರ ಹಾವಳಿ ನಿಲ್ಲುತ್ತಿಲ್ಲ. ಲಾಂಗ್ ತೋರಿಸಿ ಮೊಬೈಲ್ ಕದ್ದು ಕಳ್ಳರು ಪರಾರಿಯಾಗಲು ಯತ್ನಿಸಿರುವ ಘಟನೆ ಬೆಂಗಳೂರಿನ ಹೆಚ್ ಬಿ ಆರ್ ಲೇಔಟ್ ನಲ್ಲಿ ಈ ಒಂದು ಘಟನೆ ನಡೆದಿದೆ. ಬೈಕ್ ನಲ್ಲಿ ಬಂದು ಕಳ್ಳರು ಮೊಬೈಲ್ ಕದ್ದು ಎಸ್ಕೇಪ್ ಆಗಲು ಯತ್ನಿಸಿದ್ದಾರೆ.
ಈ ವೇಳೆ ಮಾಜಿ ಕಾರ್ಪೊರೇಟರ್ ಕಳ್ಳರನ್ನು ಚೇಸಿಂಗ್ ಮಾಡಿದ್ದಾರೆ. ಚೇಸ್ ಮಾಡಿದ ಮಾಜಿ ಕಾರ್ಪೊರೇಟರ್ ಗಣೇಶ್ ರೆಡ್ಡಿ ಕಳ್ಳರನ್ನು ಚೇಸಿಂಗ್ ಮಾಡಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತಮ್ಮ ಸ್ಕಾರ್ಪಿಯೋ ಕಾರಿನಲ್ಲಿ ಚೇಸ್ ಮಾಡಿ ಬೈಕ್ ಗೆ ಡಿಕ್ಕಿ ಹೊಡೆದಿದ್ದಾರೆ. ಘಟನೆ ಕುರಿತಂತೆ ಹೆಚ್ ಬಿ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.