ಶಿವಮೊಗ್ಗ: ಜಿಲ್ಲೆಯಲ್ಲಿ ಮಂಗಳೂರಿನಿಂದ ಶಿವಮೊಗ್ಗದ ಜೋಗದ ಜಲಪಾತಕ್ಕೆ ಪ್ರವಾಸಕ್ಕೆ ಬಂದಿದ್ದಂತ ಪ್ರವಾಸಿಗರ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ.
ಮಂಗಳೂರಿನಿಂದ ಶಿವಮೊಗ್ಗದ ಸಾಗರ ಬಳಿಯ ಜೋಗದ ಜಲಪಾತ ವೀಕ್ಷಣೆಗಾಗಿ ಖಾಸಗಿ ಬಸ್ ನಲ್ಲಿ ಪ್ರವಾಸಕ್ಕೆ ಮಂಗಳೂರಿನ 55 ಮಂದಿ ತೆರಳಿದ್ದರು. ಈ ಬಸ್ ಅರಳಗೋಡು ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಬಸ್ಸು ಪಲ್ಟಿ ಹೊಡೆದಿದೆ.
ಈ ಸಂದರ್ಭದಲ್ಲಿ ಪ್ರವಾಸಿ ಬಸ್ಸಿನಲ್ಲಿ 55 ಜನರು ಇದ್ದರು ಎಂಬುದಾಗಿ ತಿಳಿದು ಬಂದಿದೆ. ಇವರಲ್ಲಿ 15 ಮಂದಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಕಾರ್ಗಲ್ ಹಾಗೂ ಸಾಗರದ ಉಪ ವಿಭಾಗೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
‘ರಾಷ್ಟ್ರೀಯ ಇಂಧನ ಸಂರಕ್ಷಣೆ 2024’: ಕರ್ನಾಟಕಕ್ಕೆ 2ನೇ ಸ್ಥಾನ, ಇಂಧನ ಅಭಿವೃದ್ಧಿ ನಿಗಮದ ಸಾಧನೆಗೆ ಪ್ರಶಸ್ತಿ