ಮಂಡ್ಯ: ಜಿಲ್ಲೆಯಲ್ಲಿ ಹನುಮ ಸಂಕೀರ್ತನಾ ಯಾತ್ರೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿಯಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ. ಇದೀಗ ಸ್ಥಳದಲ್ಲಿ ಬಿಗುವಿನ ವಾತಾವರಣ ಇರುವುದಾಗಿ ಹೇಳಲಾಗುತ್ತಿದೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿಯಲ್ಲಿ ಹನುಮ ಸಂಕೀರ್ತನಾ ಯಾತ್ರೆ ತೆರಳುತ್ತಿದ್ದ ಸಂದರ್ಭದಲ್ಲಿ ಪೊಲೀಸರು, ಹನುಮ ಮಾಲಾಧಾರಿಗಳ ನಡುವೆ ತಳ್ಳಾಟ ನೂಕಾಟ ನಡೆದಿದೆ. ಈ ಮೂಲಕ ಹೈಡ್ರಾಮಾವೇ ನಡೆದಿದೆ.
ಬ್ಯಾರಿಕೇಡ್ ಹಾಕಿದ್ದನ್ನು ಲೆಕ್ಕಿಸದೇ ಹನುಮ ಮಾಲಾಧಾರಿಗಳು ನುಗ್ಗಲು ಯತ್ನಿಸಿದ್ದಾರೆ. ಅವರನ್ನು ತಡೆದು ಪೊಲೀಸರು ನಿಲ್ಲಿಸಿದ್ದಾರೆ. ಇದೀಗ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.