ಬೆಂಗಳೂರು: ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಬೆಂಬಲಿತ ಕೆಂಚಪ್ಪಗೌಡರು ಆಯ್ಕೆಯಾಗಿದ್ದಾರೆ.
ರಾಜ್ಯ ಒಕ್ಕಲಿಗರ ಸಂಘದ ಚುನಾವಣೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಮೇಲುಗೈ ಸಾಧಿಸಿದ್ದಾರೆ. ಆದರೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಭಾರೀ ಹಿನ್ನಡೆಯಾಗಿದೆ. ಈ ಮೂಲಕ ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷರಾಗಿ ಡಿಕೆಶಿ ಬೆಂಬಲಿತ ಕೆಂಚಪ್ಪಗೌಡ ಆಯ್ಕೆಯಾಗಿದ್ದಾರೆ.
ಇನ್ನೂ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಡಾ. ಅಂಜಿನಪ್ಪಗೆ ಸೋಲು ಕಂಡಿದ್ದಾರೆ. ಡಿಕೆ ಶಿವಕುಮಾರ್ ಬೆಂಬಲದೊಂದಿಗೆ ಸ್ಪರ್ಧಿಸಿದ್ದ ಕೆಂಚಪ್ಪಗೌಡಗೆ 21 ಸದಸ್ಯರ ಬೆಂಬಲದೊಂದಿಗೆ ಗೆಲುವು ಸಾಧಿಸಿದ್ದಾರೆ.
ಇನ್ನೂ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರ ಬೆಂಬಲಿತ ಅಭ್ಯರ್ಥಿ ಆಂಜಿನಪ್ಪ ಅವರು ಕೇವಲ 14 ಸದಸ್ಯರ ಮತಗಳನ್ನು ಪಡೆದು ಸೋಲು ಕಂಡಿದ್ದಾರೆ.