ತುಮಕೂರು : ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಗೊಳಿಸಿದಂತ ಪ್ರಕರಣ ಸಂಬಂಧ ಡ್ರೋನ್ ಪ್ರತಾಪ್ ಗೆ ಡಿಸೆಂಬರ್ 26 ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ತುಮಕೂರಿನ ಮಧುಗಿರಿ ಜೆಎಂಎಫ್ ಸಿ ಕೋರ್ಟ್ ಆದೇಶ ಹೊರಡಿಸಿದೆ.
ಕೃಷಿ ಹೊಂಡ ಒಂದರದಲ್ಲಿ ಸೋಡಿಯಂ ಬಳಸಿ ಡ್ರೋನ್ ಪ್ರತಾಪ್ ಸ್ಪೋಟಗೊಳಿಸಿದ್ದನು. ಈ ಸಂಬಂಧ ಕೇಸ್ ದಾಖಲಾಗಿತ್ತು. ಆನಂತ್ರ ಆತನನ್ನು ಮಿಡಿಗೇಶಿ ಪೊಲೀಸರು ಬಂಧಿಸಿದ್ದರು. ಇಂದು ಕೋರ್ಟ್ ಗೆ ಡ್ರೋನ್ ಪ್ರತಾಪ್ ರನ್ನು ಹಾಜರುಪಡಿಸಲಾಗಿತ್ತು. ಇದೀಗ ಕೋರ್ಟ್ ಡಿಸೆಂಬರ್ 26 ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ.
ತುಮಕೂರು ಜಿಲ್ಲೆಯ ಮಧುಗಿರಿ ತಾಲೂಕಿನಲ್ಲಿ ಡ್ರೋನ್ ಪ್ರತಾಪ್ ಕಳೆದ ಕೆಲವು ದಿನಗಳ ಹಿಂದೆ ಅನುಮತಿ ಪಡೆಯದೆ ಕೃಷಿ ಹೊಂಡದಲ್ಲಿ ಸೋಡಿಯಂ ಬಳಸಿ ಸ್ಪೋಟಿಸಿದ್ದ ಘಟನೆ ವಿಡಿಯೋ ಮಾಡಿ ಹರಿಬಿಟ್ಟಿದ್ದರು. ಈ ವಿಚಾರವಾಗಿ ಮದುಗಿರಿ ತಾಲೂಕು ಮಿಡಿಶೇಸಿ ಠಾಣೆ ಪೋಲಿಸರು ಅರೆಸ್ಟ್ ಮಾಡಿದ್ದರು. ಬಳಿಕ ಅವರ ಇಬ್ಬರು ಸ್ನೇಹಿತರನ್ನು ಕೂಡ ಅರೆಸ್ಟ್ ಮಾಡಿ ವಿಚಾರಣೆ ಒಳಪಡಿಸಿದ್ದರು.ಇದೀಗ ಡಿಸೆಂಬರ್ 26ರವರೆಗೆ ಅಂದರೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶ ಹೊರಡಿಸಿದೆ.
ಇನ್ನು ಡ್ರೋನ್ ಪ್ರತಾಪ್ ಕರೆದೊಯ್ದು ಪೊಲೀಸರು ಸ್ಥಳ ಮಹಜರು ನಡೆಸಿದರು. ಅವೆನ್ಯೂ ರಸ್ತೆಯಲ್ಲಿ ಸೋಡಿಯಂ ಖರೀದಿಸಿದಂತ ಮಾಹಿತಿ ಪಡೆದು ಅಂಗಡಿಗೂ ಕರೆದೊಯ್ದು ಸ್ಥಳ ಮಹಜರು ಮಾಡಿದರು. ಅಲ್ಲದೇ ಡ್ರೋನ್ ಪ್ರತಾಪ್ ಮನೆ, ಕಚೇರಿಗೂ ಕರೆದೊಯ್ದು ಸ್ಥಳ ಮಹಜರು ಮಾಡಿದರು.