ತುಮಕೂರು : ಕೃಷಿಹೊಂಡದಲ್ಲಿ ಸೋಡಿಯಂ ಮೆಟಲ್ ಸ್ಫೋಟಿಸಿ ಸದ್ಯ ಜೈಲು ಪಾಲಾಗಿರುವ ಡ್ರೋನ್ ಪ್ರತಾಪ್ ಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆm ಈ ಒಂದು ಸೋಡಿಯಂ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿಗಳ ಕಚೇರಿ ಸಂಪೂರ್ಣ ವರದಿ ನೀಡಲು ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಹೌದು ಸೋಡಿಯಂ ಮೆಟಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಧುಗಿರಿ ಸಿಪಿಐ ಕಚೇರಿಗೆ ಇದೀಗ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಆಗಮಿಸಿದ್ದಾರೆ. ಸಂಪೂರ್ಣ ವರದಿಗೆ ಸಿಎಂ ಕಚೇರಿ ಸೂಚನೆ ನೀಡಿದ ಹಿನ್ನೆಲೆಯಲ್ಲಿ ಈಗ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಪೊಲೀಸರನ್ನು ಭೇಟಿಯಾಗಿದ್ದರೆ.
ಸಿಎಂ ಕಚೇರಿಯಿಂದ ಸಂಪೂರ್ಣ ವರದಿ ನೀಡಲು ಸೂಚನೆ ನೀಡಿದ್ದರ ಹಿನ್ನೆಲೆಯಲ್ಲಿ ಮಧುಗಿರಿ ಸಿಪಿಐ ಅವರನ್ನು ಮಾಲಿನ್ಯ ನಿಯಂತ್ರಣ ಅಧಿಕಾರಿಗಳು ಭೇಟಿಯಾದರು. ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮಂಡಳಿ ಅಧಿಕಾರಿಗಳು ಆಗಮಿಸಿದ್ದಾರೆ. ಸಂಪೂರ್ಣ ವರದಿ ನೀಡಲು ಸಿಎಂ ಕಚೇರಿ ಸೂಚನೆ ನೀಡಿದ್ದರಿಂದ, ಡ್ರೋನ್ ಪ್ರತಾಪ್ ಗೆ ಮತ್ತಷ್ಟು ಸಂಕಷ್ಟ ಹೆಚ್ಚಾಗಲಿದೆ.