ಬೆಂಗಳೂರು : ನಮ್ಮ ಊರಿಗೆ ನಮ್ಮ ಶಾಸಕರು ಕಾರ್ಯಕ್ರಮದ ಯಶಸ್ಸಿಗಾಗಿ ಶಾಸಕರಾದ ಪ್ರದೀಪ್ ಈಶ್ವರ್ ಅವರನ್ನು ಸಿಎಂ ಸಿದ್ದರಾಮಯ್ಯ ಬೆನ್ನುತಟ್ಟಿ ಶುಭ ಹಾರೈಸಿದ್ದಾರೆ.
ಈ ಕುರಿತು ಟ್ವಿಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ತಾಲೂಕು ಮಟ್ಟದ ಅಧಿಕಾರಿಗಳ ತಂಡಕಟ್ಟಿಕೊಂಡು, ಗ್ರಾಮಗಳಿಗೆ ತೆರಳಿ ಜನರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಅಥವಾ ಕಾಲಮಿತಿಯಲ್ಲಿ ಅದನ್ನು ಪರಿಹರಿಸುವ ಕಾರ್ಯ ಕೈಗೆತ್ತಿಕೊಂಡಿರುವ ಶಾಸಕ ಪ್ರದೀಪ್ ಈಶ್ವರ್ ಅವರ ವಿನೂತನ ಪ್ರಯತ್ನಕ್ಕೆ ಬೆನ್ನುತಟ್ಟಿ ಶುಭ ಹಾರೈಸಿದೆ. ಇಂತಹ ಜನಪರವಾದ ಕಾರ್ಯಗಳಿಗೆ ನನ್ನ ಹಾಗೂ ನಮ್ಮ ಸರ್ಕಾರದ ಬೆಂಬಲ ಸದಾಕಾಲ ಇರಲಿದೆ ಎಂಬ ವಿಶ್ವಾಸವನ್ನು ಅವರಲ್ಲಿ ತುಂಬಿದ್ದೇನೆ ಎಂದರು.
“ನಮ್ಮ ಊರಿಗೆ ನಮ್ಮ ಶಾಸಕರು” ಕಾರ್ಯಕ್ರಮದ ಯಶಸ್ಸಿಗಾಗಿ ಶಾಸಕರಾದ ಪ್ರದೀಪ್ ಈಶ್ವರ್ ಅವರ ಹೆಗಲಿಗೆ ಹೆಗಲಾಗಿ ದುಡಿಯುತ್ತಿರುವ ಚಿಕ್ಕಬಳ್ಳಾಪುರ ತಹಸೀಲ್ದಾರ್ ಅನಿಲ್, ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿ ಮಂಜುನಾಥ್, ಮಂಚೇನಹಳ್ಳಿ ತಹಸೀಲ್ದಾರ್ ದೀಪ್ತಿ ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಹೊನ್ನಯ್ಯ ಅವರ ಶ್ರಮ ಕೂಡ ಶ್ಲಾಘನೀಯ.
ಇದುವರೆಗೆ ಸುಮಾರು 50 ಹಳ್ಳಿಗಳಿಗೆ ತೆರಳಿ ರಸ್ತೆ, ಚರಂಡಿ, ಬಸ್ ವ್ಯವಸ್ಥೆ, ವಿದ್ಯುತ್ ಸಂಪರ್ಕ, ಪಿಂಚಣಿ, ನಿವೇಶನ ಹೀಗೆ ಸಾರ್ವಜನಿಕರ ನಿತ್ಯ ಬದುಕಿಗೆ ತೊಡಕಾಗಿದ್ದ ಹಲವು ಸಮಸ್ಯೆಗಳನ್ನು ಆಲಿಸಿ, ಪರಿಹರಿಸಿದ್ದಾರೆ. ಈ ಕಾರ್ಯಕ್ರಮ ಇನ್ನಷ್ಟು ಜನರನ್ನು ತಲುಪುವ ಮೂಲಕ ಜನರ ಜೀವನಮಟ್ಟ ಸುಧಾರಿಸಲು ನೆರವಾಗಲಿ ಎಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.
ತಾಲೂಕು ಮಟ್ಟದ ಅಧಿಕಾರಿಗಳ ತಂಡಕಟ್ಟಿಕೊಂಡು, ಗ್ರಾಮಗಳಿಗೆ ತೆರಳಿ ಜನರ ಅಹವಾಲುಗಳನ್ನು ಆಲಿಸಿ, ಸ್ಥಳದಲ್ಲೇ ಅಥವಾ ಕಾಲಮಿತಿಯಲ್ಲಿ ಅದನ್ನು ಪರಿಹರಿಸುವ ಕಾರ್ಯ ಕೈಗೆತ್ತಿಕೊಂಡಿರುವ ಶಾಸಕ ಪ್ರದೀಪ್ ಈಶ್ವರ್ ಅವರ ವಿನೂತನ ಪ್ರಯತ್ನಕ್ಕೆ ಬೆನ್ನುತಟ್ಟಿ ಶುಭ ಹಾರೈಸಿದೆ.
ಇಂತಹ ಜನಪರವಾದ ಕಾರ್ಯಗಳಿಗೆ ನನ್ನ ಹಾಗೂ ನಮ್ಮ ಸರ್ಕಾರದ ಬೆಂಬಲ ಸದಾಕಾಲ… pic.twitter.com/4w5L4p0DNf— Siddaramaiah (@siddaramaiah) December 16, 2024