Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುದ್ಧದ ಮಧ್ಯೆ ‘LPG ಉತ್ಪಾದನೆ’ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ; ‘ತುರ್ತು ಕಾನೂನು’ ಜಾರಿ!

06/03/2026 6:41 PM

“ಯುದ್ಧಗಳಲ್ಲಿ ನಾಗರಿಕ ಸಾಯಬಾರದು” : ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಶ್ರೀಲಂಕಾ ಅಧ್ಯಕ್ಷ ಶಾಂತಿಯ ಕರೆ

06/03/2026 6:33 PM

ಕಣ್ಣಲ್ಲಿ ನೀರು ತರಿಸುವ ‘ಈರುಳ್ಳಿ’ ಆರೋಗ್ಯಕ್ಕೆ ವರದಾನ: ‘ಹಸಿ ಈರುಳ್ಳಿ ಸೇವನೆ’ಯಿಂದ ಹತ್ತಾರು ಲಾಭ!

06/03/2026 6:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ರಾಜ್ಯದಲ್ಲಿ ‘ಭ್ರೂಣ ಹತ್ಯೆ’ ವಿರುದ್ಧ ಭರ್ಜರಿ ಕಾರ್ಯಾಚರಣೆ: ಡಿಕಾಯ್ ಅಪರೇಷನ್ ಮೂಲಕ ’46 ಮಂದಿ ಅರೆಸ್ಟ್’
KARNATAKA

BIG NEWS: ರಾಜ್ಯದಲ್ಲಿ ‘ಭ್ರೂಣ ಹತ್ಯೆ’ ವಿರುದ್ಧ ಭರ್ಜರಿ ಕಾರ್ಯಾಚರಣೆ: ಡಿಕಾಯ್ ಅಪರೇಷನ್ ಮೂಲಕ ’46 ಮಂದಿ ಅರೆಸ್ಟ್’

By kannadanewsnow0916/12/2024 3:32 PM

ಬೆಳಗಾವಿ ಸುವರ್ಣಸೌಧ: ರಾಜ್ಯದಲ್ಲಿ 2023-24 ರಿಂದ ಇಲ್ಲಿಯವರೆಗೆ ಭ್ರೂಣಹತ್ಯೆ ಸಂಬಂಧಿಸಿದಂತೆ 8 ಪ್ರಕರಣ ದಾಖಲಿಸಿ 46 ಜನರನ್ನು ಬಂಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇದೇ ವೇಳೆ ಸದನಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.

ರಾಜ್ಯದಲ್ಲಿ ಸ್ಕ್ಯಾನಿಂಗ್ ಸೆಂಟರ್ ಮತ್ತು ಆಸ್ಪತ್ರೆಗಳ ಮೇಲೆ ತಪಾಸಣೆಗಳನ್ನು ಜಾಸ್ತಿ ಮಾಡಿರುವುದರಿಂದ ಹೆಚ್ಚಿನ ಸಂಖ್ಯೆಯ ಭ್ರೂಣ ಹತ್ಯೆ ಪ್ರಕರಣಗಳು ಕಂಡುಹಿಡಿಯಲಾಗಿದೆ. ಅಲ್ಲದೇ ಡಿಕಾಯ್‌ ಆಪರೇಷನ್‌ಗಳ ಯಶಸ್ವಿ ಕಾರ್ಯಾಚರಣೆಗಳನ್ನ ನಡೆಸಿ ಭ್ರೂಣೆ ಹತ್ಯೆ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.‌

ರಾಜ್ಯದಲ್ಲಿ ಭ್ರೂಣ ಹತ್ಯೆ ತಡೆಯಲು ಸರ್ಕಾರವು ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯಡಿ ಬರುವ ಎಲ್ಲಾ ಶಾಸನಬದ್ದ ಸಮಿತಿಗಳನ್ನು ರಾಜ್ಯ ಮತ್ತು ಜಿಲ್ಲೆಗಳಲ್ಲಿ ರಚನೆ ಮಾಡಲಾಗಿದೆ. 2018 ರಿಂದ ರಾಜ್ಯದಲ್ಲಿ ‘ಬಾಲಿಕಾ’ ಆನ್ಲೈನ್ ಸಾಪ್ಟ್ವೇರ್ ಮುಖಾಂತರ ಎಲ್ಲಾ ಸ್ಕ್ಯಾನಿಂಗ್ ಸೆಂಟರ್ಗಳನ್ನು ಕಡ್ಡಾಯವಾಗಿ ನೋಂದಣಿ ಮತ್ತು ನವೀಕರಣ ನಡೆಸಲಾಗುತ್ತಿದೆ.

ರಾಜ್ಯ ಮಟ್ಟದಲ್ಲಿ ಶೇ.100 ರಷ್ಟು ಗರ್ಭಿಣಿಯರ ನೊಂದಣಿ ಪ್ರಕ್ರಿಯೆಯು ಚಾಲ್ತಿಯಲ್ಲಿದ್ದು, ಗ್ರಾಮ ಮಟ್ಟದಲ್ಲಿ ಜನನ ಸಮಯದ ಲಿಂಗಾನುಪಾತದ ದತ್ತಾಂಶಗಳನ್ನು ಮಾಹಿತಿ ತಂತ್ರಜ್ಞಾನದ ಮುಖಾಂತರ ಮೇಲ್ವಿಚಾರಣೆ ಮಾಡಲು ಕಲ್ಪಿಸಲಾಗುತ್ತಿದೆ ಎಂದರು.

ರಾಜ್ಯದಲ್ಲಿ ಇದುವರೆಗೂ ಪಿ.ಸಿ&ಪಿ.ಎನ್.ಡಿ.ಟಿ. ಕಾಯ್ದೆಯನ್ನು ಉಲ್ಲಂಘಿಸಿರುವ ಸ್ಕ್ಯಾನಿಂಗ್ ಸೆಂಟರ್ / ಮಾಲೀಕರು/ ವೈದ್ಯರ ವಿರುದ್ಧ ಒಟ್ಟು 136 ಪ್ರಕರಣಗಳನ್ನು ನ್ಯಾಯಾಲಯದಲ್ಲಿ ದಾವೆ ಹೂಡಲಾಗಿದ್ದು, 74 ಪ್ರಕರಣಗಳು ದಂಡವಿಧಿಸಿ ಖುಲಾಸೆಗೊಂಡಿದ್ದು, 65 ಪ್ರಕರಣಗಳು ನ್ಯಾಯಾಲಯದಲ್ಲಿ ವಿವಿಧ ಹಂತದಲ್ಲಿ ಬಾಕಿಯಿರುತ್ತದೆ ಎಂದು ತಿಳಿಸಿದರು.

ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಮಾಡುವಂತಹ ಸ್ಕ್ಯಾನಿಂಗ್ ಸೆಂಟರ್ / ಆಸ್ಪತ್ರೆ/ ವೈದ್ಯರು / ದಲ್ಲಾಳಿಗಳು / ಗರ್ಭಿಣಿಯರ ಸಂಬಂಧಿಕರ ವಿರುದ್ಧ ಮಾಹಿತಿ ನೀಡಿ, ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲು ಸಹಕರಿಸುವ ಮಾಹಿತಿದಾರರಿಗೆ ಕರ್ನಾಟಕ ಸರ್ಕಾರದಿಂದ ನೀಡುತ್ತಿದ್ದ ಬಹುಮಾನವನ್ನು ರೂ.50 ಸಾವಿರದಿಂದ ರೂ.1ಲಕ್ಷದವರೆಗೆ ಹೆಚ್ಚಿಸಲಾಗಿದೆ ಎಂದರು.

ಪಿ.ಸಿ. & ಪಿ.ಎನ್.ಡಿ.ಟಿ. ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ಆಯುಕ್ತರ ಅಧ್ಯಕ್ಷತೆಯಲ್ಲಿ ರಾಜ್ಯ ಕಾರ್ಯಪಡೆಯನ್ನು ರಚಿಸಲಾಗಿದ್ದು, ರಾಜ್ಯ ಮಟ್ಟದಿಂದ ಬೆಂಗಳೂರು ಗ್ರಾಮಾಂತರ, ಬೆಳಗಾವಿ, ಮಂಡ್ಯ, ಕೋಲಾರ ಜಿಲ್ಲೆಗಳಲ್ಲಿ ಗುಪ್ತ ಕಾರ್ಯಚರಣೆ ನಡೆಸಲಾಗಿದೆ ಎಂದರು.

ಹೆಣ್ಣು ಭ್ರೂಣ ಹತ್ಯೆ ಮಾಡದಂತೆ ರಾಜ್ಯದಂತ ಜನ ಜಾಗೃತಿ ಹಾಗೂ ಅರಿವು ಮೂಡಿಸುವಂತಹ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ವಿವರಿಸಿದರು.

ಸಿಸೇರಿಯನ್ ಹೆರಿಗೆಗಳಿಗೆ ಕಡಿವಾಣ ಹಾಕಲು ನೂತನ ಕಾರ್ಯಕ್ರಮ ಜಾರಿ: ಸಚಿವ ದಿನೇಶ್ ಗುಂಡೂರಾವ್

SHOCKING : ಡಾಬಾದಲ್ಲಿ ಊಟ ಮಾಡುವಾಗಲೇ `ಹೃದಯಾಘಾತ’ : ಕುಸಿದು ಬಿದ್ದು ವ್ಯಕ್ತಿ ಸ್ಥಳದಲ್ಲೇ ಸಾವು.! ಆಘಾತಕಾರಿ ವಿಡಿಯೋ ವೈರಲ್

Share. Facebook Twitter LinkedIn WhatsApp Email

Related Posts

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಎಂದ ಸಿಎಂ

06/03/2026 6:15 PM4 Mins Read

ನಾಳೆ ಬೆಂಗಳೂರಲ್ಲಿ ‘ಏಡ್ಸ್ ನಿಯಂತ್ರಣ’ ಸಂಬಂಧ ‘ಸುರಕ್ಷಾ ಸಂಕಲ್ಪ ಕಾರ್ಯಾಗಾರ’ ಆಯೋಜನೆ

06/03/2026 6:09 PM1 Min Read

ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

06/03/2026 5:37 PM1 Min Read
Recent News

ಯುದ್ಧದ ಮಧ್ಯೆ ‘LPG ಉತ್ಪಾದನೆ’ ಹೆಚ್ಚಳಕ್ಕೆ ಕೇಂದ್ರ ಸರ್ಕಾರ ಮಾಸ್ಟರ್ ಪ್ಲ್ಯಾನ್ ; ‘ತುರ್ತು ಕಾನೂನು’ ಜಾರಿ!

06/03/2026 6:41 PM

“ಯುದ್ಧಗಳಲ್ಲಿ ನಾಗರಿಕ ಸಾಯಬಾರದು” : ಪಶ್ಚಿಮ ಏಷ್ಯಾ ಸಂಘರ್ಷದ ನಡುವೆ ಶ್ರೀಲಂಕಾ ಅಧ್ಯಕ್ಷ ಶಾಂತಿಯ ಕರೆ

06/03/2026 6:33 PM

ಕಣ್ಣಲ್ಲಿ ನೀರು ತರಿಸುವ ‘ಈರುಳ್ಳಿ’ ಆರೋಗ್ಯಕ್ಕೆ ವರದಾನ: ‘ಹಸಿ ಈರುಳ್ಳಿ ಸೇವನೆ’ಯಿಂದ ಹತ್ತಾರು ಲಾಭ!

06/03/2026 6:31 PM

ಚಾಣಕ್ಯ ನೀತಿ: ಇಂದಿನ ಸಂಕೀರ್ಣ ಬದುಕಿಗೂ ದಾರಿದೀಪ ಆಚಾರ್ಯರ ಅಮೂಲ್ಯ ಸೂತ್ರಗಳು | Chanakya Neeti

06/03/2026 6:23 PM
State News
KARNATAKA

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ರಾಜ್ಯದಲ್ಲಿ 56,432 ಖಾಲಿ ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಎಂದ ಸಿಎಂ

By kannadanewsnow0906/03/2026 6:15 PM KARNATAKA 4 Mins Read

ಬೆಂಗಳೂರು; 2026-27 ನೇ ಆಯವ್ಯಯದಲ್ಲಿ ರಾಜ್ಯದ ಜನರ ಭರವಸೆಗಳನ್ನು ಈಡೇರಿಸುವ ಜೊತೆಗೆ ವಿತ್ತೀಯ ಶಿಸ್ತನ್ನೂ ಪಾಲಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

ನಾಳೆ ಬೆಂಗಳೂರಲ್ಲಿ ‘ಏಡ್ಸ್ ನಿಯಂತ್ರಣ’ ಸಂಬಂಧ ‘ಸುರಕ್ಷಾ ಸಂಕಲ್ಪ ಕಾರ್ಯಾಗಾರ’ ಆಯೋಜನೆ

06/03/2026 6:09 PM

ಕರ್ನಾಟಕ ಒನ್ ಕೇಂದ್ರಗಳಿಗೆ ಆನ್‌ಲೈನ್ ಅರ್ಜಿ ಆಹ್ವಾನ

06/03/2026 5:37 PM

ಕರ್ನಾಟಕ ಬಜೆಟ್ 2026-27: ಹೀಗಿದೆ ಇಂದಿನ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್

06/03/2026 5:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.