ಬೆಂಗಳೂರು: ನಗರದಲ್ಲಿ ದಿನೇ ದಿನೇ ಪತ್ನಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಟೆಕ್ಕಿ ಅತುಲ್ ಸುಭಾಷ್ ಬಳಿಕ, ಈಗ ವ್ಯಕ್ತಿಯೊಬ್ಬ ತನ್ನ ಹೆಂಡತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬೆಂಗಳೂರಿನ ಉತ್ತರ ತಾಲ್ಲೂಕಿ ಹೆಸರುಘಟ್ಟ ರಸ್ತೆಯಲ್ಲಿರುವಂತ ಸಿಲುವೆಪುರದಲ್ಲಿ ಪತ್ನಿಯ ಕಿರುಕುಳ ಹಾಗೂ ಆಕೆಯ ಅಕ್ರಮ ಸಂಬಂಧದಿಂದ ಬೇಸತ್ತು ಬಾಲರಾಜ್(41) ಎಂಬಾತ ಆತ್ಮಹತ್ಯೆಗೆ ಶರಣಾಗಿದ್ದಾನೆ.
18 ವರ್ಷದ ಹಿಂದೆ ಬಾಲರಾಜ್ ಅವರು ಪತ್ನಿ ಕುಮಾರಿಯನ್ನು ಎರಡನೇ ಮದುವೆಯಾಗಿದ್ದರು. ಈ ಬಳಿಕ ಆಕೆ ಕಿರುಕುಳ ನೀಡುತ್ತಿದ್ದರು. ಜೊತೆಗೆ ಅಕ್ರಮ ಸಂಬಂಧ ಕೂಡ ಹೊಂದಿದ್ದರು ಎನ್ನಲಾಗಿದೆ. ಈ ವಿಚಾರಕ್ಕೆ ಗಂಡ-ಹೆಂಡತಿಯರ ನಡುವೆ ಗಲಾಟೆ ಕೂಡ ಆಗಿತ್ತು. ಆಗ ಗಂಡನ ಮನೆಯನ್ನು ತೊರೆದಿದ್ದಂತ ಕುಮಾರಿ, ತವರು ಮನೆ ಸೇರಿದ್ದಳು.
ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಬಾಲರಾಜ್ ಪತ್ನಿಯ ಕಿರುಕುಳ, ಆಕೆಯ ಅಕ್ರಮ ಸಂಬಂಧದ ಬಗ್ಗೆ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಂಡ್ಯದಲ್ಲಿ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ: ಕೊಟ್ಯಾಂತರ ರೂ ಮೌಲ್ಯದ ‘ಅಂಬರ್ ಗ್ರಿಸ್’ ವಶಕ್ಕೆ
ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!