ಬೆಂಗಳೂರು: ಇಂದು ವಯೋಸಹಜ ಖಾಯಿಲೆಯಿಂದಾಗಿ ವೃಕ್ಷಮಾತೆ, ಪದ್ಮಶ್ರೀ ಪುರಸ್ಕೃತ ತುಳಸಿಗೌಡ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಲಕ್ಷಾಂತರ ಗಿಡಗಳನ್ನು ನೆಟ್ಟು, ನೀರೆರೆದ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ಪರಿಸರಪ್ರೇಮಿ ತುಳಸಿಗೌಡ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಜೀವನ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ್ದ ತುಳಸಿಗೌಡ ಅವರು ನಿವೃತ್ತಿಯ ನಂತರವೂ ತಮ್ಮ ಪರಿಸರ ಕಾಳಜಿಯಿಂದ ವಿಮುಖರಾಗದೆ ಗಿಡನೆಡುವುದನ್ನು ಮುಂದುವರೆಸಿ, ಪದ್ಮಶ್ರೀಯಂತಹ ಅತ್ಯುನ್ನತ ಗೌರವಕ್ಕೆ ಪಾತ್ರರಾದವರು ಎಂದಿದ್ದಾರೆ.
ತುಳಸಿಗೌಡ ಅವರ ಪರಿಸರದ ಬಗೆಗಿನ ಪ್ರೀತಿ – ಕಾಳಜಿಯನ್ನು ಸ್ಮರಿಸುತ್ತ, ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ ಎಂದು ಹೇಳಿದ್ದಾರೆ.
ಲಕ್ಷಾಂತರ ಗಿಡಗಳನ್ನು ನೆಟ್ಟು, ನೀರೆರೆದ ಅಂಕೋಲಾ ತಾಲ್ಲೂಕು ಹೊನ್ನಳ್ಳಿಯ ಪರಿಸರಪ್ರೇಮಿ ತುಳಸಿಗೌಡ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಜೀವನ ನಿರ್ವಹಣೆಗಾಗಿ ಅರಣ್ಯ ಇಲಾಖೆಯಲ್ಲಿ ದಿನಗೂಲಿ ಕೆಲಸಕ್ಕೆ ಸೇರಿದ್ದ ತುಳಸಿಗೌಡ ಅವರು ನಿವೃತ್ತಿಯ ನಂತರವೂ ತಮ್ಮ ಪರಿಸರ ಕಾಳಜಿಯಿಂದ ವಿಮುಖರಾಗದೆ ಗಿಡನೆಡುವುದನ್ನು ಮುಂದುವರೆಸಿ, ಪದ್ಮಶ್ರೀಯಂತಹ… pic.twitter.com/JygzlvZ8L2
— Siddaramaiah (@siddaramaiah) December 16, 2024