ಮಂಡ್ಯ: 87ನೇ ಕನ್ನಡ ಸಾಹಿತ್ಯ ಸಮ್ಮೇಳನ ಮಂಡ್ಯದಲ್ಲಿ ಡಿಸೆಂಬರ್ 20ರಿಂದ 22ರವರೆಗೆ ನಡೆಯಲಿದೆ. ಈ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಅನೇಕ ಸರ್ಕಾರಿ ನೌಕರರು ಪಾಲ್ಗೊಳ್ಳಲಿದ್ದಾರೆ. ಇಂತಹ ಸರ್ಕಾರಿ ನೌಕರರಿಗೆ ಓಓಡಿ ( On Official Duty – OOD) ಸೌಲಭ್ಯವನ್ನು ಸರ್ಕಾರ ಕಲ್ಪಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಮಾಹಿತಿಯನ್ನು ಸರ್ಕಾರಿ ನೌಕರರಿಗೆ ಬಿಡುಗಡೆ ಮಾಡಿದೆ. ಅದೇನು ಅಂತ ಮುಂದೆ ಓದಿ.
ಈ ಕುರಿತಂತೆ ಮಂಡ್ಯ ಉಪವಿಭಾಗಾಧಿಕಾರಿ ಹಾಗೂ ಸದಸ್ಯ ಕಾರ್ಯದರ್ಶಿಗಳು ನೋಂದಣಿ ಸಮಿತಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಇವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಮಂಡ್ಯ ಜಿಲ್ಲೆಯಲ್ಲಿ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ದಿನಾಂಕ:20-12- 2024 ರಿಂದ ದಿನಾಂಕ:22-12-2024 ರಂದು ಜರುಗಲಿದ್ದು ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಬೇರೆ ಜಿಲ್ಲೆಗಳಿಂದ ಆಗಮಿಸುವ ಸರ್ಕಾರಿ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಣಿ ಮಾಡಿಕೊಂಡು ಸ್ಥಳದಲ್ಲಿಯೇ ಸಮ್ಮೇಳನಕ್ಕೆ ಆಗಮಿಸಿರುವ ಬಗ್ಗೆ ಜಿಲ್ಲಾಧಿಕಾರಿಗಳ ಸಹಿಯ ಸಹಿತ ಹಾಜರಾತಿಯನ್ನು ಡಿಜಿಟಲ್ ಮೂಲಕ ಅವರ ವಾಟ್ಸ್ ಆಪ್ ಅಥವಾ ಇ-ಮೇಲ್ ಮೂಲಕ ನೀಡಲಾಗುವುದು ಎಂದಿದ್ದಾರೆ.
ಸ್ಥಳದಲ್ಲಿ ನೋಂದಾಯಿಸಿಕೊಳ್ಳದ ಸರ್ಕಾರಿ ನೌಕರರಿಗೆ ಮ್ಯಾನ್ಯೂಯಲ್(Manual) ಮೂಲಕ ಹಾಜರಾತಿಯನ್ನು ನೀಡಲು ಅವಕಾಶವಿರುವುದಿಲ್ಲ. ಆದುದರಿಂದ ದಿನಾಂಕ:20-12-2024 ರಿಂದ ದಿನಾಂಕ:22-12-2024 ರಂದು ನಡೆಯುತ್ತಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಆಗಮಿಸುವ ನೌಕರರುಗಳು ಸ್ಥಳದಲ್ಲಿಯೇ ತಂತ್ರಾಂಶದಲ್ಲಿ ನೋಂದಾಯಿಸಿಕೊಂಡು ಹಾಜರಾತಿಯನ್ನು ಪಡೆಯಲು ತಿಳಿಸಿದ್ದಾರೆ.