ಶಬರಿಮಲೆ : ಶಬರಿಮಲೆಯಲ್ಲಿ ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್ಗಳ ಮಂಟಪದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೋಮವಾರ ತಡರಾತ್ರಿ ನಡೆದಿದೆ.
ಶಬರಿಮಲೆಯಲ್ಲಿ ಎಲ್ಲರೂ ಅಯ್ಯಪ್ಪ ಸ್ವಾಮಿಯ ದರ್ಶನಕ್ಕೆ ಹೋಗುತ್ತಿರುವಾಗ ಅಯ್ಯಪ್ಪ ಸ್ವಾಮಿಯ ಭಕ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭಕ್ತರೊಬ್ಬರು ತುಪ್ಪದ ಅಭಿಷೇಕ ಕೌಂಟರ್ಗಳ ಮಂಟಪದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆದರೆ ಶಬರಿಮಲೆಯ ತುಪ್ಪದ ಅಭಿಷೇಕ ಕೌಂಟರ್ ಗಳ ಮಂಟಪದಿಂದ ಜಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಅಲ್ಲಿದ್ದವರು ಕೂಡಲೇ ಅಯ್ಯಪ್ಪ ಸ್ವಾಮಿಯ ಭಕ್ತನನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು.
ಮೃತರನ್ನು ಕರ್ನಾಟಕದ ಕನಕಪುರದ ನಿವಾಸಿ ಕುಮಾರಸ್ವಾಮಿ (40) ಎಂದು ಗುರುತಿಸಲಾಗಿದೆ. ಮೇಲಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಕುಮಾರಸ್ವಾಮಿ ಅವರನ್ನು ಕೊಟ್ಟಾಯಂ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಚಿಕಿತ್ಸೆ ಫಲಿಸದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕುಮಾರಸ್ವಾಮಿ ಖಿನ್ನತೆಯಿಂದ ಬಳಲುತ್ತಿದ್ದು, ಈ ಹಿನ್ನೆಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದೆ.
శబరిమలలోని నెయ్యాభిషేకం కౌంటర్ల మండపంపై నుంచి దూకి ఆత్మహత్యయత్నం చేసిన ఓ భక్తుడు.. ఘటనకు సంబంధించిన పూర్తి వివరాలు తెలియాల్సి వుంది.
A devotee in Sabarimala attempted suicide by jumping from the top of the Neyyabhishekam counters.#sabarimala #shabarimala pic.twitter.com/caTrhftZAK
— Telugu Scribe (@TeluguScribe) December 16, 2024
ಘಟನೆ ಕುರಿತು ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಘಟನೆಯ ಸಂಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಿದೆ.