ಕಲಬುರ್ಗಿ: ಜಿಲ್ಲೆಯಲ್ಲಿ ಬಾಣಂತಿಯರ ಸಾವು ಪ್ರಕರಣಗಳು ಮುಂದುವರೆದಿದೆ. ಇಂದು ಗಂಡುಮಗುವಿಗೆ ಜನ್ಮ ನೀಡಿದ ಬಳಿಕ ರಕ್ತದೊತ್ತಡ ಕಡಿಮೆಯಾಗಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ.
ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕು ಆಸ್ಪತ್ರೆಗೆ ಅಳಂದ ಗ್ರಾಮದ ಭಾಗ್ಯಶ್ರೀ(22) ಎಂಬುವರನ್ನು ನಿನ್ನೆ ಮಧ್ಯಾಹ್ನ ಹೆರಿಗೆಗಾಗಿ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ 8 ಗಂಟೆಗೆ ಗಂಡು ಮಗುವಿಗೆ ಜನ್ಮ ನೀಡಿದ್ದರು. ಈ ಬಳಿಕ ಭಾಗ್ಯಶ್ರೀಗೆ ಕಡಿಮೆ ರಕ್ತದೊತ್ತಡ ಕಾಣಿಸಿಕೊಂಡಿತ್ತು.
ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಗುಲ್ಬರ್ಗ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದರು. ಅದರಂತೆ ಜಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದಂತ ವೇಳೆಯಲ್ಲಿ ಚಿಕಿತ್ಸೆ ಫಲಿಸದೇ ಭಾಗ್ಯಶ್ರೀ ನಿಧನರಾಗಿದ್ದಾರೆ. ಬಾಣಂತಿ ಭಾಗ್ಯಶ್ರೀ ನಿಧನಕ್ಕೆ ಆಸ್ಪತ್ರೆಗೆ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂಬುದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ.
BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi
ಷೇರು ಹೂಡಿಕೆದಾರರಿಗೆ ಭಾರೀ ನಷ್ಟ: ಸೆನ್ಸೆಕ್ಸ್ 1,000 ಅಂಕಗಳ ಕುಸಿತ | Share market crashes