ಶಿವಮೊಗ್ಗ : ಶಿವಮೊಗ್ಗ ಮತ್ತು ತಾವರೆಚಟ್ನಹಳ್ಳಿ ವಿವಿ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಇರುವುದರಿಂದ ಡಿ.17 ರಂದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮೆಸ್ಕಾಂ ಮಾಹಿತಿ ನೀಡಿದ್ದು, ಡಿ.19ರಂದು ಕುವೆಂಪುನಗರ, ಎನ್.ಎ.ಎಸ್. ಬಡಾವಣೆ, ಶಿವಬಸವನಗರ, ವೀರಭದ್ರೇಶ್ವರ ಬಡಾವಣೆ, ಇಂದಿರಾಗಾಂಧಿ ಬಡಾವಣೆ, ಜ್ಯೋತಿನಗರ, ಜೆಎನ್‌ಎನ್‌ಸಿ ಕಾಲೇಜು, ಪರ್ಫೆಕ್ಟ್ ಅಲಾಯಿ ಪ್ಯಾಕ್ಟರಿ, ರೆಡ್ಡಿ ಬಡಾವಣೆ, ಬೊಮ್ಮನಕಟ್ಟೆ ಎ ಬ್ಲಾಕ್ ನಿಂದ ಹೆಚ್ ಬ್ಲಾಕ್‌ವರೆಗೆ, ಹಳೆ ಬೊಮ್ಮನಕಟ್ಟೆ, ವಿನಾಯಕ ಬಡಾವಣೆ ಕರೆಂಟ್ ಇರೋದಿಲ್ಲ ಎಂದಿದೆ.
ದೇವಂಗಿ 2ನೇ ಹಂತದ ಬಡಾವಣೆ, ಶಾಂತಿನಗರ, ನವುಲೆ, ಅಶ್ವತ್‌ನಗರ, ಎಲ್.ಬಿ.ಎಸ್.ನಗರ, ಕೀರ್ತಿನಗರ, ಬಸವೇಶ್ವರ ನಗರ, ಕೃಷಿನಗರ, ತರಳುಬಾಳು ಬಡಾವಣೆ, ಸೇವಾಲಾಲ್‌ನಗರ, ಡಾಲರ್ಸ್ ಕಾಲೋನಿ, ಪವನ ಶ್ರೀ ಬಡಾವಣೆ, ಮಲ್ಲೇಶ್ವರನಗರ, ಗುಂಡಪ್ಪಶೆಡ್, ಶಂಕರ ಮಠ ರಸ್ತೆ, ಜಯದೇವ ರೈಸ್‌ಮಿಲ್, ಶಂಕರ ಕಾಲೋನಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.
BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi
GOOD NEWS: 2025ರಿಂದ ‘NCERT ಪಠ್ಯಪುಸ್ತಕ’ಗಳ ಬೆಲೆ ಇಳಿಕೆ: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NCERT textbooks