ಬೆಂಗಳೂರು: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಕೆ ಆರೋಪದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ದಾಖಲಿಸಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್ ನೀಡಿದೆ.
ಚುನಾವಣಾ ಬಾಂಡ್ ಗಳ ಸೋಗಿನಲ್ಲಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಆಗಿನ ಉಪರಾಷ್ಟ್ರಪತಿ ಹಾಗೂ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರು ಸಹ ಆರೋಪಿಯಾಗಿದ್ದಾರೆ.
ಅಂದಹಾಗೇ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಬಿವೈ ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್ ನೀಡಿದೆ.
BREAKING : ವೃಕ್ಷಮಾತೆ ‘ತುಳಸಿಗೌಡ’ ನಿಧನಕ್ಕೆ ಕನ್ನಡದಲ್ಲೇ ಸಂತಾಪ ಸೂಚಿಸಿದ ಪ್ರಧಾನಿ ಮೋದಿ | PM Modi
ಇನ್ಮುಂದೆ ಆನ್‌ಲೈನ್ ಮೂಲಕ NEET ಪರೀಕ್ಷೆ.?: ಶೀಘ್ರ ನಿರ್ಧಾರವೆಂದ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ | NEET exam