ಶಿವಮೊಗ್ಗ: ಜಿಲ್ಲೆಯ ಹೊಸನಗರದ ತಾಲ್ಲೂಕಿನ ನಿಟ್ಟೂರಿನ ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಅವರ ಮೇಲೆ ಬಿಜೆಪಿ ಕಾರ್ಯಕರ್ತ ಮಾರಣಾಂತಿಕ ಹಲ್ಲೆ ಮಾಡಿದ್ದರು. ಇಂತಹ ನಾಗೋಡಿ ವಿಶ್ವನಾಥ್ ಅವರ ಮನೆಗೆ ಮಾಜಿ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ಭೇಟಿ ನೀಡಿ, ಧೈರ್ಯ ತುಂಬಿದರು.
ಇಂದು ನಿಟ್ಟೂರಿಗೆ ಭೇಟಿ ನೀಡಿದ ಮಾಜಿ ಶಿಕ್ಷಣ ಸಚಿವ ಹಾಗೂ ಕಾಂಗ್ರೆಸ್ ವಕ್ತಾರ ಕಿಮ್ಮನೆ ರತ್ನಾಕರ್, ಇತ್ತೀಚೆಗೆ ರಾಜಕೀಯ ದ್ವೇಷಕ್ಕೆ ಹಲ್ಲೆಗೊಳಗಾದ ನಿಟ್ಟೂರು ಗ್ರಾಮ ಪಂಚಾಯತ್ ಸದಸ್ಯ ನಾಗೋಡಿ ವಿಶ್ವನಾಥ್ ಅವರನ್ನು ಭೇಟಿಯಾದರು.
ಈ ವೇಳೆ ಮಾತನಾಡಿದಂತ ಅವರು, ಬಿಜೆಪಿ ಕಾರ್ಯಕರ್ತನೊಬ್ಬ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಮೇಲೆ ಹಲ್ಲೆ ನಡೆಸಿದ್ದು ಖಂಡನೀಯ. ಹಲ್ಲೆ ಮಾಡಿದಂತ ಆರೋಪಿಯನ್ನು ಪೊಲೀಸರು ಬಂಧಿಸಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. ಅಲ್ಲದೇ ಸ್ಥಳದಲ್ಲಿದ್ದಂತ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ತಪ್ಪಿತಸ್ಥರಿಗೆ ಶಿಕ್ಷೆ ನೀಡುವಂತೆ ಸೂಚಿಸಿದರು.
ಇನ್ನೂ ಕಾಂಗ್ರೆಸ್ ಪಕ್ಷ ನಿಮ್ಮ ಜೊತೆಗಿದೆ. ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗಬೇಡಿ. ಧೈರ್ಯದಿಂದ ಇರುವಂತೆ ನಿಟ್ಟೂರು ಗ್ರಾಮ ಪಂಚಾಯ್ತಿ ಸದಸ್ಯ ನಾಗೋಡಿ ವಿಶ್ವನಾಥ್ ಅವರಿಗೆ ತಿಳಿಸಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ವಿಧಾನಪರಿಷತ್ತಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ ಅಂಗೀಕಾರ
BREAKING: ವಿಧಾನಪರಿಷತ್ತಿನಲ್ಲಿ ಸರಕು ಮತ್ತು ಸೇವೆಗಳ ತೆರಿಗೆ, ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ ಅಂಗೀಕಾರ