Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM

BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

15/02/2026 10:23 PM

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: 2 ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿ : ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ’ ಅಂಗೀಕಾರ.!
KARNATAKA

BIG NEWS: 2 ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿ : ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ’ ಅಂಗೀಕಾರ.!

By kannadanewsnow5718/12/2024 5:39 AM

ಬೆಳಗಾವಿ : ಸಾರ್ವಜನಿಕ ಆಸ್ತಿಗಳನ್ನು ರಕ್ಷಿಸುವ ಹಾಗೂ ಸಣ್ಣ ಉದ್ದಿಮೆಗಳಿಗೆ ಸರಳ ಆಡಳಿತ ನೀಡುವ ಸಲುವಾಗಿ ಕರ್ನಾಟಕ ಭೂ ಕಂದಾಯ ವಿಧೇಯಕಕ್ಕೆ ಅಗತ್ಯ ತಿದ್ದುಪಡಿಗಳನ್ನು ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಮಂಗಳವಾರ ವಿಧಾನಸಭೆಯಲ್ಲಿ ಕರ್ನಾಟಕ ಭೂ ಕಂದಾಯ ಮೂರನೇ ತಿದ್ದುಪಡಿ ವಿಧೇಯಕ-2024 ಮಂಡಿಸಿ ಸದನಕ್ಕೆ ಮಾಹಿತಿ ನೀಡಿದ ಅವರು, “ಕರ್ನಾಟಕ ಭೂ ಕಂದಾಯ ಕಾನೂನು ಕಂದಾಯ ಇಲಾಖೆಯ ಅಡಿಪಾಯ. ಆದರೆ, ಈ ಕಾನೂನಿನಲ್ಲಿ ಕೆಲವು ವ್ಯಾಖ್ಯಾನಗಳು ಕ್ಲಿಷ್ಟಕರವಾಗಿದೆ. ಹೀಗಾಗಿ ಈ ಕಾನೂನುಗಳನ್ನು ಸರಳೀಕರಣಗೊಳಿಸಿ ಸರ್ಕಾರಿ ಆಸ್ತಿಗಳ ರಕ್ಷಣೆಗೆ ಮತ್ತಷ್ಟು ಬಲ ತುಂಬುವ ಹಾಗೂ ಸಣ್ಣ ಉದ್ದಿಮೆದಾರರಿಗೆ ಸರಳ ಆಡಳಿತ ನೀಡುವ ಸಲುವಾಗಿ ಈ ಕಾನೂನಿಗೆ ಪ್ರಮುಖ ನಾಲ್ಕು ತಿದ್ದುಪಡಿಗಳನ್ನು ತರಲಾಗಿದೆ” ಎಂದು ತಿಳಿಸಿದರು.

ತಿದ್ದುಪಡಿ ಬಗ್ಗೆ ವಿಸ್ತೃತ ಮಾಹಿತಿ ನೀಡಿದ ಅವರು, “ಯಾವುದೇ ಜಮೀನು ಖಾಸಗಿ ವ್ಯಕ್ತಿಗೆ ಸೇರಿಲ್ಲದಿದ್ದಲ್ಲಿ ಅದು ಸರ್ಕಾರಕ್ಕೆ ಸೇರಿದೆ ಎಂಬ ಸಾರಾಂಶವನ್ನು ಕರ್ನಾಟಕ ಭೂ ಕಂದಾಯ ಕಾನೂನಿನ ಕಲಂ 67 ಹೇಳುತ್ತದೆ. ಕೆಲವರು ತಮ್ಮ ಹೆಸರಿಗೆ ಸದರಿ ಜಮೀನುಗಳ ಖಾತೆ ಮಾಡಿಕೊಡಿ ಎಂದು ತಹಶೀಲ್ದಾರರಿಗೆ ಮನವಿ ಮಾಡುತ್ತಾರೆ. ಆದರೆ, ಅವರ ಬಳಿ ಜಮೀನಿನ ಮಾಲೀಕತ್ವ ನಿರೂಪಿಸುವ ಮೂಲ ದಾಖಲೆ ಅಥವಾ ಸಮರ್ಪಕ ದಾಖಲೆ ಇಲ್ಲದಿದ್ದರೆ ಅವರಿಗೆ ಜಮೀನಿನ ಖಾತೆ ಮಾಡಿಕೊಡುವುದು ಸಾಧ್ಯವಿಲ್ಲ.

ತಹಶೀಲ್ದಾರರು ಖಾತೆ ಮಾಡಿಕೊಡದಿದ್ದಲ್ಲಿ ಅರ್ಜಿದಾರರು ಜಿಲ್ಲಾಧಿಕಾರಿಗಳ ನ್ಯಾಯಾಲಯಕ್ಕೆ ಅಪೀಲು ಹೋಗುತ್ತಿದ್ದರು. ಆದರೆ, ಈ ಅಪೀಲನ್ನು ಉಪ ವಿಭಾಗಾಧಿಕಾರಿ ರ್ಯಾಂಕ್‌ ಮೇಲ್ಪಟ್ಟ ಅಧಿಕಾರಿಯೇ ಆಲಿಸಬೇಕು ಎಂದು ಈ ಹಿಂದಿನ ಕಾನೂನಿನಲ್ಲಿ ವ್ಯಾಖ್ಯಾನಿಸಲಾಗಿತ್ತು. ಹೀಗಾಗಿ ಇಂತಹ ಪ್ರಕರಣಗಳನ್ನು ಜಿಲ್ಲಾಧಿಕಾರಿಗಳೇ ನ್ಯಾಯ ತೀರ್ಮಾನ ಮಾಡುತ್ತಿದ್ದರು. ಆದರೆ, ಕೆಲವು ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳೇ ಸಾರ್ವಜನಿಕ ಹಿತಾಸಕ್ತಿಯ ವಿರುದ್ಧ ಆದೇಶ ಮಾಡಿರುವ ಉದಾಹರಣೆಗಳಿವೆ. ಬೆಂಗಳೂರಿನಲ್ಲೇ ಇಂತಹ ಹಲವು ಪ್ರಕರಣಗಳು ನಡೆದಿವೆ. ಖಾಸಗಿಯವರಿಗೆ ಮ್ಯುಟೇಷನ್‌ ಮಾಡಿಕೊಡಿ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿ, ಅವರ ಹೆಸರಿನಲ್ಲಿ ಖಾತೆಯೂ ಆಗೋಗಿರುವ ಸಾಕಷ್ಟು ಘಟನೆಗಳು ಸಂಭವಿಸಿವೆ” ಎಂದು ವಿಷಾದಿಸಿದರು.

“ಹಳೆಯ ಕಾನೂನಿನ ಪ್ರಕಾರ ಜಿಲ್ಲಾಧಿಕಾರಿಗಳು ಆದೇಶ ಮಾಡಿದರೆ, ಪ್ರಕರಣದ ಮುಂದಿನ ಅಪೀಲು ನೇರವಾಗಿ ಸಿವಿಲ್‌ ನ್ಯಾಯಾಲಯಕ್ಕೆ ಹೋಗುತ್ತವೆ. ಪರಿಣಾಮ ಹೈಕೋರ್ಟ್‌ನಲ್ಲಿ ಸರ್ಕಾರ ಫಜೀತಿಗೆ ಸಿಲುಕಬೇಕಾದ ಪ್ರಸಂಗ ಎದುರಾಗಿದೆ. ಇಂತಹ ಸಂದರ್ಭದಲ್ಲಿ ಕಾನೂನು ಹೋರಾಟಕ್ಕೆ ಸರ್ಕಾರಕ್ಕೆ ಹೆಚ್ಚಿನ ಕಾಲಾವಕಾಶವೇ ಸಿಗದಿರುವ ಸಾಧ್ಯತೆಯೇ ಹೆಚ್ಚು. ಪರಿಣಾಮ ನಾವು ಸಾರ್ವಜನಿಕ ಆಸ್ತಿಗಳನ್ನು ಸಂರಕ್ಷಿಸುವುದು ಕಷ್ಟವಾಗಬಹುದು. ಅದಕ್ಕಾಗಿಯೇ ಈಗ ನಾವು ಕಾನೂನಿಗೆ ತಿದ್ದುಪಡಿಗೊಳಿಸಿ ಮೊದಲ ಅಪೀಲನ್ನು ಆಲಿಸುವ ಅಧಿಕಾರವನ್ನು ಉಪ ವಿಭಾಗಾಧಿಕಾರಿಗಳಿಗೆ ನೀಡಿದ್ದೇವೆ” ಎಂದು ತಿದ್ದುಪಡಿಯ ಬಗ್ಗೆ ಸ್ಪಷ್ಟೀಕರಣ ನೀಡಿದರು.

“ಹೊಸ ತಿದ್ದುಪಡಿಯ ಪ್ರಕಾರ ಸರ್ಕಾರಕ್ಕೆ ಕಾನೂನು ಹೋರಾಟ ನಡೆಸಲು ಹೆಚ್ಚಿನ ಕಾಲಾವಕಾಶ ಸಿಗಲಿದೆ. ಮೊದಲ ಅಪೀಲಿನಲ್ಲಿ ಉಪ-ವಿಭಾಗಾಧಿಕಾರಿಗಳು ತಪ್ಪು ಆದೇಶ ಮಾಡಿದರೂ ಸಹ, ಜಿಲ್ಲಾಧಿಕಾರಿಗಳಲ್ಲಿ ಎರಡನೇ ಅಪೀಲು ಹೋಗಬಹುದು. ಮೂರನೇ ಅಪೀಲಿಗೆ ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣ ಅಸ್ಥಿತ್ವದಲ್ಲಿದ್ದು ಅಲ್ಲಿಗೂ ಮೊರೆ ಹೋಗಬಹುದು” ಎಂದು ಮಾಹಿತಿ ನೀಡಿದರು.

ಮುಂದುವರೆದು, “ಕಂದಾಯ ಇಲಾಖೆ ತಕರಾರು ವಿಚಾರಣೆಗೆ ಕರ್ನಾಟಕ ಮೇಲ್ಮನವಿ ನ್ಯಾಯಾಧಿಕರಣ ಅಸ್ಥಿತ್ವದಲ್ಲಿದೆ. ಯಾರೇ ಖಾಸಗಿ ವ್ಯಕ್ತಿ ಅಥವಾ ಸರ್ಕಾರ ಇಲ್ಲಿ ಅಪೀಲು ಮಾಡಬಹುದು. ಮೂರನೇ ಅಪೀಲು ಇಲ್ಲಿಗೆ ಇದ್ದು ಸರ್ಕಾರಕ್ಕೆ ತ್ವರಿತವಾಗಿ ನ್ಯಾಯ ಸಿಗುವ ವಿಶ್ವಾಸವಿದೆ. ಇದನ್ನೂ ಮೀರಿ ಮುಂದಿನ ಹಂತದಲ್ಲಿ ಹೈಕೋರ್ಟ್‌ ಮೊರೆ ಹೋಗಬಹುದು. ಒಟ್ಟಾರೆ ಈ ತಿದ್ದುಪಡಿಯ ಮೂಲ ಉದ್ದೇಶ ಸರ್ಕಾರಿ ಆಸ್ತಿಗಳನ್ನು ಸಂರಕ್ಷಿಸುವುದು ಮತ್ತು ಸರ್ಕಾರಕ್ಕೆ ಅನುಕೂಲ ಮಾಡಿಕೊಡುವುದೇ ಆಗಿದೆ” ಎಂದು ತಿಳಿಸಿದರು.

ತಹಶೀಲ್ದಾರರಿಗೆ ಒತ್ತುವರಿ ತೆರವಿನ ಪರಮಾಧಿಕಾರ:

ಬೆಂಗಳೂರು ಸೇರಿದಂತೆ ರಾಜ್ಯದ ಯಾವುದೇ ಭಾಗದಲ್ಲಿ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ. ಅದನ್ನು ತೆರವುಗೊಳಿಸುವ ಸಂಪೂರ್ಣ ಅಧಿಕಾರ ತಹಶೀಲ್ದಾರರಿಗೆ ಇದೆ. ಆದರೆ, ಕರ್ನಾಟಕ ಭೂ ಕಂದಾಯ ಸೆಕ್ಷನ್‌ 104 ಕಾನೂನನ್ನು ಈ ಹಿಂದೆ ತುಂಬಾ ಕ್ಲಿಷ್ಟಕರವಾಗಿ ವ್ಯಾಖ್ಯಾನಿಸಲಾಗಿತ್ತು. ಆದರೆ, ಇದೀಗ ಈ ಕಾನೂನನ್ನು ಸರಳೀಕರಣಗೊಳಿಸಲಾಗಿದೆ. ಕಾಲುವೆ, ಬಿ-ಖರಾಬು ಸೇರಿದಂತೆ ಯಾವುದೇ ಸರ್ಕಾರಿ ಜಮೀನು ಒತ್ತುವರಿಯಾಗಿದ್ದರೆ, ಅದನ್ನು ತೆರವುಗೊಳಿಸುವ ಪರಮಾಧಿಕಾರ ತಹಶೀಲ್ದಾರರಿಗೆ ಇದೆ ಎಂದು ತೀರಾ ಸರಳವಾಗಿ ಉಲ್ಲೇಖಿಸಲಾಗಿದೆ. ಈ ತಿದ್ದುಪಡಿ ಒತ್ತುವರಿಗಳನ್ನು ತೆರವುಗೊಳಿಸಿ ಸರ್ಕಾರಿ ಆಸ್ತಿಯನ್ನು ಸಂರಕ್ಷಿಸಲು ಮತ್ತಷ್ಟು ಬಲ ತುಂಬಲಿದೆ” ಎಂದು ಅಭಿಪ್ರಾಯಪಟ್ಟರು

ಸಣ್ಣ ಕೈಗಾರಿಕೆಗಳ ಅಭಿವೃದ್ಧಿಗಾಗಿ ತಿದ್ದುಪಡಿ

ಸಣ್ಣ ಕೈಗಾರಿಕೆಗಳಿಗೆ ಸಹಾಯ ಮಾಡುವ ನಿಟ್ಟಿನಲ್ಲೂ ಸಹ ಕರ್ನಾಟಕ ಭೂ ಕಂದಾಯ ವಿಧೇಯಕ್ಕೆ ಮಹತ್ವದ ತಿದ್ದುಪಡಿ ತರಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು.

ಟೌನ್‌ ಪ್ಲಾನಿಂಗ್‌ನಲ್ಲಿ ಈಗಾಗಲೇ ಕೈಗಾರಿಕಾ ಜೋನ್‌ ಎಂದು ನಮೂದಿಸಿದ್ದರೆ ಅಥವಾ ರೆಡ್‌ ಜೋನ್‌, ಯೆಲ್ಲೋ ಜೋನ್‌ ಎಂದು ಗುರುತಿಸಲಾಗಿದ್ದರೆ ಸಣ್ಣ ಕೈಗಾರಿಕೆಗಳ ಮಾಲೀಕರು ಮತ್ತೆ ನಮ್ಮ ಬಳಿ ಬಂದು ಕೈಗಾರಿಕಾ ವಲಯ ಎಂದು ಪರಿವರ್ತನೆಗೆ ಅನುಮತಿ ಕೇಳುವ ಅಗತ್ಯ ಇಲ್ಲ. ಎರಡು ಎಕರೆವರೆಗೆ ಪರಿವರ್ತನೆ ಅವಕಾಶ ತೆಗೆದುಹಾಕಲಾಗಿದೆ” ಎಂದು ಮಾಹಿತಿ ನೀಡಿದರು.

ಇದೇ ಸಂದರ್ಭದಲ್ಲಿ ಮಧ್ಯಪ್ರವೇಶಿಸಿದ್ದ ವಿಪಕ್ಷ ನಾಯಕ ಆರ್.‌ ಅಶೋಕ್‌ ಅವರು, “ಕಂದಾಯ ಇಲಾಖೆಯ ಸಾವಿರಾರು ಕೋಟಿ ಆಸ್ತಿ ಉಳಿಸಲು, ಕೆರೆ ಕಟ್ಟೆ ಕಾಲುವೆಗಳನ್ನು ಉಳಿಸಲು ಇಲಾಖೆಗೆ ಪ್ರತ್ಯೇಕ ಲೀಗಲ್‌ ಸೆಲ್‌ ಅತೀ ಅವಶ್ಯಕ” ಎಂದು ಸಲಹೆ ನೀಡಿದರು.

ವಿಪಕ್ಷ ನಾಯಕ ಆರ್‌ ಅಶೋಕ್‌ ಅವರ ಸಲಹೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು, “ಭೂ ಮಾಫಿಯಾದವರು ಸರ್ಕಾರಿ ಭೂಮಿಯನ್ನು ಧಮಕಿ ಹಾಕಿ ಒತ್ತುವರಿ ಮಾಡಿಕೊಂಡಿರುವ ಪ್ರಕರಣಗಳು ತೀರಾ ಕಡಿಮೆ. ಬದಲಾಗಿ ನಮ್ಮ ಅಧಿಕಾರಿಗಳ ಸಹಾಯದಿಂದಲೇ ಎಲ್ಲರೂ ಒಂದಲ್ಲಾ ಒಂದು ನಕಲಿ ದಾಖಲೆಗಳನ್ನ ಮಾಡಿಕೊಂಡಿದ್ದಾರೆ. ಅವರನ್ನೆಲ್ಲಾ ಓಡಿಸಿ ಒತ್ತುವರಿ ತೆರಿವು ಮಾಡಬೇಕು ಎಂದರೆ ಕಾನೂನು ಹೋರಾಟ ಅತ್ಯಂತ ಪ್ರಮುಖ ಪಾತ್ರವಹಿಸುತ್ತದೆ. ಆದರೆ, ಬಹುತೇಕ ಸಂದರ್ಭದಲ್ಲಿ ನಾವು ಕಾನೂನಾತ್ಮಕ ಹೋರಾಟದಲ್ಲಿ ವಿಫಲರಾಗುತ್ತಿದ್ದೇವೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಅವರ ಜೊತೆಗೂ ಸಮರ್ಪಕ ಚರ್ಚೆ ನಡೆಸಲಾಗಿದೆ. ಕಂದಾಯ ಇಲಾಖೆಗೆ ಪ್ರತ್ಯೇಕ ಲೀಗಲ್‌ ಸೆಲ್‌ ಬೇಕು ಎಂಬ ಬಗ್ಗೆ ಚರ್ಚೆ ಇದೆಯಾದರೂ, ಸರ್ಕಾರದ ಲೀಗಲ್‌ ಸೆಲ್‌ನಿಂದ ಪ್ರಸ್ತುತ ಸಹಾಯ ಸಿಗುತ್ತಿದೆ. ಲಭ್ಯವಿರುವ ವ್ಯವಸ್ಥೆಯನ್ನು ಬಳಸಿಕೊಂಡೇ ಉತ್ತಮವಾಗಿ ಕಾನೂನು ಹೋರಾಟ ನಡೆಸಲಾಗುತ್ತಿದೆ” ಎಂದರು.

ಈ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಮಂಡನೆಯ ನಂತ್ರ ಚರ್ಚೆ ನಡೆದು, ವಿಧಾನಸಭೆಯಲ್ಲಿ ಮಸೂದೆಗೆ ಅಂಗೀಕಾರ ದೊರೆಯಿತು.

BIG NEWS: 2 ಎಕರೆವರೆಗಿನ ಕೃಷಿ ಜಮೀನುಗಳಿಗೆ ಭೂ ಪರಿವರ್ತನೆಯಿಂದ ವಿನಾಯಿತಿ : ವಿಧಾನಸಭೆಯಲ್ಲಿ ‘ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ’ ಅಂಗೀಕಾರ.! BIG NEWS: Karnataka Land Revenue Amendment Bill passed in Assembly exempting agricultural lands up to 2 acres from conversion
Share. Facebook Twitter LinkedIn WhatsApp Email

Related Posts

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM1 Min Read

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM2 Mins Read

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM1 Min Read
Recent News

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

15/02/2026 10:30 PM

BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

15/02/2026 10:23 PM

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM
State News
KARNATAKA

ಸಾಗರದ ಮಾರಿಕಾಂಬೆಗೆ ಹರಿದು ಬಂದ ಕಾಣಿಕೆ: ಬರೋಬ್ಬರಿ 77 ಲಕ್ಷದ 40 ಸಾವಿರ ಹುಂಡಿ ಹಣ ಸಂಗ್ರಹ

By kannadanewsnow0915/02/2026 10:30 PM KARNATAKA 1 Min Read

ಶಿವಮೊಗ್ಗ: ಫೆಬ್ರವರಿ.3ರಿಂದ 11ರವರೆಗೆ 9 ದಿನಗಳ ಕಾಲ ಸಾಗರದ ಇತಿಹಾಸ ಪ್ರಸಿದ್ಧ ಮಾರಿಕಾಂಬೆ ಜಾತ್ರಾ ಮಹೋತ್ಸವ ಅದ್ಧೂರಿಯಾಗಿ ನೆರವೇರಿತು. 9…

ಒಳ ಮೀಸಲಾತಿ ವಿಚಾರದಲ್ಲಿ ಯಾವುದೇ ಸಮುದಾಯಕ್ಕೆ ಅನ್ಯಾಯವಾಗಲು ಬಿಡೊಲ್ಲ: ಸಚಿವ ಶಿವರಾಜ್ ತಂಗಡಗಿ

15/02/2026 9:08 PM

SHOCKING: ಟಿವಿ ನೋಡುವುದು ಕಡಿಮೆ ಮಾಡು ಅಂತ ತಾಯಿ ಬೈದಿದ್ದಕ್ಕೆ, ಮನನೊಂದು ಬಾಲಕಿ ಆತ್ಮಹತ್ಯೆ

15/02/2026 9:05 PM

ಬೆಂಗಳೂರಲ್ಲಿ ಅಪಾಯಕಾರಿ ಒಣಗಿದ ಮರ, ರೆಂಬೆ-ಕೊಂಬೆಗಳನ್ನು ತೆರವು

15/02/2026 8:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.