ಬೆಂಗಳೂರು : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿನ ನ್ಯಾಷಿನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಷನ್ ನಿಂದ ಮಾನ್ಯತೆ ಪಡೆದಿರುವ ಸರ್ಕಾರಿ / ಅರೆ ಸರ್ಕಾರಿ/ ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ (B.Ed) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ) ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು. ವಿದ್ಯಾರ್ಥಿಗಳು ಬಿಎಡ್ ಕೋರ್ಸ್ ಗಳಲ್ಲಿ ದಾಖಲಾಗಿರುವ ಹಾಗೂ ಶುಲ್ಕವನ್ನು ಭರಿಸುವ ಬಗ್ಗೆ ಎಲ್ಲಾ ಅಧಿಕೃತ ದಾಖಲತಾತಿಗಳನ್ನು ಸಲ್ಲಿಸತಕ್ಕದ್ದು. ಆಸಕ್ತ ವಿದ್ಯಾರ್ಥಿಗಳು ಅರ್ಜಿಗಳನ್ನು ಆನ್ ಲೈನ್ ನಲ್ಲಿ https://Sevasindhu.karnataka.gov.in ನಲ್ಲಿ ಡಿಸೆಂಬರ್ 25 2024 ರ ಸಂಜೆ 5.30 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: 8277799990, Website: https://dom.karnataka.gov.in ಸಂಪರ್ಕಿಸಬಹುದು.