ಬೆಳಗಾವಿ : ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಮುಖೇನ ಮನೆಮಾತಾಗಿರುವ ಕೆಲವು ಗೃಹಲಕ್ಷ್ಮಿಯರನ್ನು ಬೆಳಗಾವಿಯ ಸುವರ್ಣ ವಿಧಾನಸೌಧಕ್ಕೆ ಆಹ್ವಾನಸಲಾಗಿದೆ.
ರಾಜ್ಯ ಸರ್ಕಾರದ ಗೃಹಲಕ್ಷ್ಮಿ ಯೋಜನೆಯ ಹಣ ಕೂಡಿಟ್ಟು, ಸಮರ್ಪಕವಾಗಿ ಬಳಕೆ ಮಾಡಿಕೊಂಡಿರುವ ಕೆಲವು ಗೃಹಲಕ್ಷ್ಮಿಯರನ್ನು ಬೆಳಗಾವಿಯ ಸುವರ್ಣ ವಿಧಾನಸೌಧದ ದರ್ಶನಕ್ಕೆ ಆಹ್ವಾನಿಸಿದ ಹಿನ್ನೆಲೆಯಲ್ಲಿ ಇಂದು ಬೆಳಗಾವಿಯ ಗೃಹ ಕಚೇರಿಯಿಂದ ಸುವರ್ಣ ವಿಧಾನಸೌಧಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೃಹಲಕ್ಷ್ಮಿಯರ ಜೊತೆಗೆ ಪ್ರಯಾಣ ಬೆಳೆಸಿದ್ದಾರೆ.