ಬೆಂಗಳೂರು : ರಾಜ್ಯ ಸರ್ಕಾರವು ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಪ್ರತಿ ವರ್ಷ 2.50 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಶಿವರಾಜ್ ತಂಗಡಗಿ ಅವರು ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಸಚಿವರು, ಪ್ರತಿ ವರ್ಷ ಹಿಂದುಳಿದ ವರ್ಗಗಳ 2.50 ಲಕ್ಷ ವಿದ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಹಾಸ್ಟೆಲ್ ಗಳ ಮೂಲಸೌಕರ್ಯ, ಪುಸ್ತಕ, ಗ್ರಂಥಾಲಯಗಳಿಗೂ ಆದ್ಯತೆ ನೀಡಲಾಗಿದೆ. ಉತ್ತಮ ಗುಣಮಟ್ಟದ ಆಹಾರ, ಹಾಸ್ಟೆಲ್ ಗಳ ನವೀಕರಣ, ಪುಸ್ತಕ ವಿತರಣೆ, ಗ್ರಂಥಾಲಯದ ವ್ಯವಸ್ಥೆ ಕಲ್ಪಿಸಲಾಗುತ್ತಿದೆ ಎಂದು ಹೇಳಿದ್ದಾರೆ.