ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು ಚಲಿಸುತ್ತಿದ್ದ ಕೆ ಎಸ್ ಆರ್ ಟಿ ಸಿ ಬಸ್ ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ. ಕೂಡಲೆ ಎಚ್ಚೆತ್ತುಕೊಂಡ ಚಾಲಕ ಮತ್ತು ನಿರ್ವಾಹಕ ಬಸ್ ನಲ್ಲಿದ್ದ ಸುಮಾರು 40ಕ್ಕು ಹೆಚ್ಚು ಪ್ರಯಾಣಿಕರನ್ನು ಬಸ್ನಿಂದ ಕೆಳಗೆ ಇಳಿಸಿದ್ದಾರೆ. ಹೀಗಾಗಿ ಭಾರಿ ಅನಾಹುತ ಒಂದು ತಪ್ಪಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಮಂಚೇನಹಳ್ಳಿ ಹೊರವಲಯದಲ್ಲಿ ಈ ಘಟನೆ ನಡೆದಿದೆ.
ಹೌದು ಗೌರಿಬಿದನೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳುತ್ತಿದ್ದ ಸಾರಿಗೆ ಬಸ್ ಬಸ್ ನಲ್ಲಿ 40 ಜನ ಪ್ರಾಣಿಸುತ್ತಿದ್ದರು. ಕೂಡಲೇ ಸ್ಥಳಿಯರು ಪ್ರಯಾಣಿಕರನ್ನು ಹಾಗೂ ಚಾಲಕ ಮತ್ತು ನಿರ್ವಾಹಕರನ್ನು ಸುರಕ್ಷಿತವಾಗಿ ರಕ್ಷಣೆ ಮಾಡಿದ್ದಾರೆ. ಸ್ಥಳೀಯರು ಸಾರಿಗೆ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಈ ವೇಳೆಸಾರಿಗೆ ಸಿಬ್ಬಂದಿಗಳು ಪ್ರಯಾಣಿಕರಿಗೆ ಬೇರೆ ಬಸ್ ವ್ಯವಸ್ಥೆ ಮಾಡಿದರು.