ಬಳ್ಳಾರಿ : ಇದು ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಮಂಗಳಮುಖಿಯೊಬ್ಬರು ಉನ್ನತ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಹೌದು ಬಳ್ಳಾರಿಯ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಲ್ಲಿ ರೇಣುಕಾ ಪೂಜಾರಿಯವರು ಅರೆಕಾಲಿಕ ಕನ್ನಡ ಪ್ರಾಧ್ಯಾಪಕಿಯಾಗಿ ನೇಮಕಗೊಂಡಿದ್ದಾರೆ. ಒಬ್ಬ ಮಂಗಳಮುಖಿ ಪ್ರಾಧ್ಯಾಪಕಿಯಾಗಿ ಸೇವೆ ಸಲ್ಲಿಸುತ್ತಿರುವುದು ಕರ್ನಾಟಕದಲ್ಲೇ ಮೊದಲು.
ಬಳ್ಳಾರಿ ಜಿಲ್ಲೆಯ ಕುರುಗೋಡು ಪಟ್ಟಣದ ರೆಣುಕಾ ಪೂಜಾರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಹುಟ್ಟೂರಿನಲ್ಲಿಯೇ ಮುಗಿಸಿದ್ದರು. ಬಳ್ಳಾರಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪಿಯು ಶಿಕ್ಷಣ, ಕುರುಗೋಡಿನಲ್ಲಿ ಪದವಿ ಹಾಗೂ ಕನ್ನಡ ವಿಷಯದಲ್ಲಿ ಸ್ನಾತಕ್ಕೋತ್ತರ ಪದವಿಯನ್ನು ಬಳ್ಳಾರಿಯ ವಿಜಯನಗರ ಶ್ರೀಕೃಷ್ನದೇವರಾಯ ವಿವಿಯಲ್ಲಿ ಮುಗಿಸಿದ್ದರು.ಇದೀಗ ಪ್ರಾದ್ಯಾಪಕರಾಗಿ ನೇಮಕವಾಗಿರುವುದು ಕರ್ನಾಟಕದಲ್ಲಿ ಇದೆ ಮೊದಲು .
ವಿದ್ಯಾರ್ಥಿಯಾಗಿರುವ ವೇಳೆ ದೇಹದಲ್ಲಿ ನೈಸರ್ಗಿಕ ಬದಲಾವಣೆ ಆದ ಹಿನ್ನೆಲೆಯಲ್ಲಿ ಮಂಗಳಮುಖಿಯಾಗಿ ಬದಲಾಗಿದ್ದಾರೆ. ಎಸ್ಎಸ್ ಎಲ್ಸಿ, ಪಿಯುಸಿ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ಶೇ.70ರಷ್ಟು ಅಂಕಗಳನ್ನು ಪಡೆದಿದ್ದಾರೆ. ಇವರು, ವಿಶ್ವವಿದ್ಯಾಲಯದ ಪೂರ್ಣಕಾಲಿಕ ಅಧ್ಯಾಪಕಿಯಾಗಿ ಸೇವೆ ಸಲ್ಲಿಸಬೇಕು. ಉತ್ತಮ ಭವಿಷ್ಯ ರೂಪಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದ್ದಾರೆ.