ಮಂಡ್ಯ : ಡಿಸೆಂಬರ್ 20 ರಿಂದ ಮೂರು ಮಂಡ್ಯದಲ್ಲಿ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ.
ದಿನಾಂಕ: 20-12-2024 ರಿಂದ ದಿನಾಂಕ: 22-12-2024 ರವರೆಗೆ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಮಂಡ್ಯ ನಗರದ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ರಸ್ತೆ ಬಳಿಯ ಅಮರಾವತಿ ಹೋಟೆಲ್ ಹಾಗೂ ಸ್ಯಾಂಟೋ ಆಸ್ಪತ್ರೆ ಹಿಂಭಾಗದ ಸ್ಥಳದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಅನೇಕ ಸಂಖ್ಯೆಯಲ್ಲಿ ಗಣ್ಯ ವ್ಯಕ್ತಿಗಳು ಹಾಗೂ ಸಹಸ್ರಾರು ಸಂಖ್ಯೆಯ ಸಾಹಿತ್ಯಾಸಕ್ತರು, ಸಾರ್ವಜನಿಕರು ಭಾಗವಹಿಸಲಿದ್ದಾರೆ. ಸದರಿ ಸಮ್ಮೇಳನ ಸ್ಥಳವು ರಾಷ್ಟ್ರೀಯ ಹೆದ್ದಾರಿ 275 ಪಕ್ಕದಲ್ಲಿರುವುದರಿಂದ ವಾಹನಗಳ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುತ್ತದೆ. ಆದ್ದರಿಂದ, ಸದರಿ ವಾಹನಗಳ ಸುಗಮ ಸಂಚಾರದ ಸಲುವಾಗಿ ಹಾಗೂ ಸಾರ್ವಜನಿಕರ ಹಿತದೃಷ್ಟಿಯಿಂದ ಮತ್ತು ಅಪಘಾತಗಳನ್ನು ತಡೆಗಟ್ಟುವ ದೃಷ್ಟಿಯಿಂದ ಸಮ್ಮೇಳನಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ಸೂಕ್ತ ಮಾರ್ಗಗಳನ್ನು ನಿಗಧಿಪಡಿಸುವುದು ಅಗತ್ಯವಿರುತ್ತದೆ. ಆದ್ದರಿಂದ, ವಾಹನಗಳ ಮಾರ್ಗ ಬದಲಾವಣೆಯನ್ನು ದಿನಾಂಕ: 20-12-2024 ರ ಬೆಳಿಗ್ಗೆ, 05-00 ಗಂಟೆಯಿಂದ ದಿನಾಂಕ: 23-12-2024 ರ ಬೆಳಿಗ್ಗೆ 06-00 ಗಂಟೆಯವರೆಗಿನ ಅವಧಿಗೆ ಆದೇಶ ಹೊರಡಿಸಬೇಕೆಂದು ಉಲ್ಲೇಖಿತ ಪತ್ರದಲ್ಲಿ ಪೊಲೀಸ್ ಅಧೀಕ್ಷಕರು, ಮಂಡ್ಯ ಜಿಲ್ಲೆ ರವರು ಕೋರಿರುತ್ತಾರೆ.
ಪೊಲೀಸ್ ಅಧೀಕ್ಷಕರು, ಮಂಡ್ಯ ಜಿಲ್ಲೆ ರವರು ಕೋರಿಕೆಯನ್ನು ಕೂಲಂಕುಷವಾಗಿ ಪರಿಶೀಲಿಸಲಾಗಿರುತ್ತದೆ. ಸದರಿಯವರ ಕೋರಿಕೆಯಂತೆ ಹಾಗೂ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ದಟ್ಟಣೆಯನ್ನು ತಡೆಗಟ್ಟುವ ಸಲುವಾಗಿ ದಿನಾಂಕ: 20-12-2024 ರ ಬೆಳಿಗ್ಗೆ 05-00 ಗಂಟೆಯಿಂದ ದಿನಾಂಕ: 23-12-2024 ರ ಬೆಳಿಗ್ಗೆ 06-00 ಗಂಟೆಯವರೆಗೆ ಎಲ್ಲಾ ರೀತಿಯ ವಾಹನಗಳ ಸಂಚಾರದ ಮಾರ್ಗಗಳನ್ನು ನಿಗಧಿಪಡಿಸುವ ಸಂಬಂಧ ಆದೇಶ ಹೊರಡಿಸುವುದು ಸೂಕ್ತವೆಂದು ನನಗೆ ಮನವರಿಕೆಯಾಗಿರುವುದರಿಂದ ಈ ಕೆಳಕಂಡಂತೆ ಆದೇಶ ಹೊರಡಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ ಡಾ. ಕುಮಾರ ಭಾ.ಆ.ಸೇ, ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ, ಮಂಡ್ಯ ಜಿಲ್ಲೆ, ಮಂಡ್ಯ ಆದ ನಾನು ಕರ್ನಾಟಕ ಮೋಟಾರು ವಾಹನಗಳ ಕಾಯಿದೆ 1988 ರ ರೀತ್ಯಾ 115 ರೀಡ್ ವಿತ್ ಕರ್ನಾಟಕ ಮೋಟಾರು ವಾಹನ ನಿಯಮಗಳ 1989 ನಿಯಮ 221 (ಎ) (5) ರಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ಚಲಾಯಿಸಿ, 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ವಾಹನ ದಟ್ಟಣೆಯನ್ನು ತಡೆಗಟ್ಟುವ ಸಲುವಾಗಿ ದಿನಾಂಕ: 20-12-2024 ರ ಬೆಳಿಗ್ಗೆ 05-00 ಗಂಟೆಯಿಂದ ದಿನಾಂಕ: 23-12-2024 ರ ಬೆಳಿಗ್ಗೆ 06-00 ಗಂಟೆಯವರೆಗೆ ಈ ಕೆಳಕಂಡಂತೆ ನಿಗಧಿಪಡಿಸಿರುವ ಮಾರ್ಗಗಳಲ್ಲಿ ಎಲ್ಲಾ ರೀತಿಯ ವಾಹನಗಳು ಸಂಚರಿಸಲು ಹಾಗೂ ಸಮ್ಮೇಳನಕ್ಕೆ ಆಗಮಿಸಲು ಮತ್ತು ನಿರ್ಗಮಿಸಲು ಸೂಕ್ತ ಮಾರ್ಗಗಳನ್ನು ನಿಗಧಿಪಡಿಸಿ ಆದೇಶ ಹೊರಡಿಸಿದೆ.