ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ಸಾರಿಗೆ ಇಲಾಖೆಯ ನೌಕರರು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದು. ಡಿ.31 ರಿಂದ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಬಸ್ ಸಂಚಾರದಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ.
ಸಾರಿಗೆ ನೌಕರರ ಹಿರಿಯ ಮುಖಂಡ ಅನಂತ ಸುಬ್ಬರಾವ್ ಅವರು ಈಗಾಗಲೇ ಡಿಸೆಂಬರ್ 31 ರಿಂದ ಸಾರಿಗೆ ಮುಷ್ಕರಕ್ಕೆ ಈಗಾಗಲೇ ಕರೆ ನೀಡಿದ್ದಾರೆ. ಡಿಸೆಂಬರ್ 31ರಿಂದ ಸಾರಿಗೆ ಮುಷ್ಕರ ಆರಂಭಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ. ರಾಜ್ಯದ 6 ಸಾರಿಗೆ ನೌಕರರ ಸಂಘಟನೆಗಳ ಒಕ್ಕೂಟ ಸೇರಿ ಜಂಟಿ ಕ್ರಿಯಾ ಸಮಿತಿ ಮಾಡಿಕೊಂಡಿದ್ದು, 6 ಸಂಘಟನೆಗಳು ಮುಷ್ಕರಕ್ಕೆ ಬೆಂಬಲ ಘೋಷಿಸಿವೆ. ಸಾರಿಗೆ ನೌಕರರ ಬೇಡಿಕೆಗಳನ್ನು ಸರ್ಕಾರ ನಿರ್ಲಕ್ಷ್ಯ ಮಾಡಿದರೆ ಸಾರಿಗೆ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗುವುದು ಎಂದು ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ.
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಕೆ.ಎಸ್.ಆರ್.ಟಿ.ಸಿ. ಬಿಎಂಟಿಸಿ, ಎನ್.ಡಬ್ಲ್ಯು ಕೆ. ಆರ್.ಟಿ.ಸಿ, ಕೆಕೆಆರ್ ಟಿಸಿ ಸೇರಿದಂತೆ ನಾಲ್ಕು ನಿಗಮಗಳಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಬಸ್ ಸಂಚಾರ ಸ್ಥಗಿತವಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.