ಬೆಳಗಾವಿ : ಕೇಂದ್ರ ಗೃಹ ಸಚಿವ ಅಮಿತ್ ಶಾ, ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇನಕಾರಿ ಹೇಳಿಕೆ ಖಂಡಿಸಿ ವಿಧಾನ ಪರಿಷತ್ನಲ್ಲಿ ಕಾಂಗ್ರೆಸ್- ಬಿಜೆಪಿ ಸದಸ್ಯರ ನಡುವೆ ವಾಗ್ವಾದ ನಡೆಯಿತು. ಇದೇ ವೇಳೆ ಮಾತಿನ ಭರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ಬಗ್ಗೆ ಸದಸ್ಯ ಸಿ.ಟಿ. ರವಿ ಅವರ ಅಶ್ಲೀಲ ಪದ ಬಳಕೆ ಕೈ ಸದಸ್ಯರ ಸಿಟ್ಟಿಗೆ ಕಾರಣವಾಯಿತು.
ಸಿಟಿ ರವಿ ಅವರು ಅಶ್ಲೀಲ ಪದ ಬಳಗಸಿದ್ದಾರೆ ಎಂದು ಆರೋಪಿಸಿ ಇದೀಗ ಕಾಂಗ್ರೆಸ್ಸರು ಸಭಾಪತಿ ಬಸವರಾಜ್ ಹೊರಟ್ಟಿ ಅವರಿಗೆ ದೂರು ನೀಡಿದ್ದು, ಸಿಟಿ ರವಿ ಅಮಾನತಿಗೆ ಕಾಂಗ್ರೆಸ್ ನಾಯಕರು ಒತ್ತಡ ಹೇರಿದ್ದಾರೆ.ಸಭಾಪತಿ ಹೊರಟ್ಟಿ ಚೇಂಬರ್ ನಲ್ಲಿ ಮಾತುಕತೆ ನಡೆಸಿದ್ದಾರೆ.ಶೂನ್ಯ ಅವಧಿಯಲ್ಲಿ ಅಮಿತ್ ಶಾ ಹೇಳಿಕೆ ಖಂಡಿಸಿ ಆಡಳಿತ ಸದಸ್ಯರು ಧರಣಿಗೆ ಮುಂದಾದರು. ಕೂಡಲೇ ಅಮಿತ್ ಶಾ ಅವರನ್ನು ಬಂಧಿಸಿ, ರಾಜೀನಾಮೆ ಪಡೆಯುವಂತೆ ಕೈ ಸದಸ್ಯರು ಆಗ್ರಹಿಸಿದರು.
ಸಿಟಿ ರವಿ ಹೇಳಿದ್ದೇನು?
ಕೇಂದ್ರ ಸಚಿವ ಅಮಿತ್ ಶಾ ಅವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುರಿತಂತೆ ಹೇಳಿಕೆ ನೀಡಿದ್ದರು ಈ ಒಂದು ಹೇಳಿಕೆಗೆ ಸದನದಲ್ಲಿ ಕಾಂಗ್ರೆಸ್ ನಾಯಕರು ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದುಕೊಂಡು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭ ದಲ್ಲಿ ಬಿಜೆಪಿ ಕೂಡ ಅಂಬೇಡ್ಕರ್ ಅವರ ಭಾವಚಿತ್ರ ಹಿಡಿದುಕೊಂಡು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದು ಅಲ್ಲದೆ, ಅವರಿಗೆ ಅಪಮಾನ ಮಾಡಿದ್ದು ಕಾಂಗ್ರೆಸ್. ಅಂಬೇಡ್ಕರ್ ಅವರಿಗೆ ಭಾರತ ರತ್ನವನ್ನೂ ಅವರು ನೀಡಲಿಲ್ಲ ಎಂದು ಹರಿಹಾಯ್ದರು.
ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಎಂದು ಸಿ.ಟಿ.ರವಿ ಆರೋಪಿಸಿದರು. ಇದಕ್ಕೆ ಕೌಂಟರ್ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀವು ರಸ್ತೆ ಅಪಘಾತದಲ್ಲಿ ಇಬ್ಬರನ್ನು ಕೊಲೆ ಮಾಡಿದ್ದೀರಿ, ಹಾಗಾಗಿ, ನೀವು ಕೊಲೆಗಾರರು ಎಂದು ದೂರಿದರು. ಆಗ ಸಿ.ಟಿ. ರವಿ, ಆಕ್ಷೇಪಾರ್ಹ ಪದ ಬಳಸಿ, ನಿಮ್ಮನ್ನು ನಾನು ಹಾಗೆ ಕರೆಯೋಕೆ ಆಗುತ್ತಾ ಎಂದರು. ಇದರಿಂದ ಕೈ ಸದಸ್ಯರ ಪಿತ್ತ ನೆತ್ತಿಗೇರಿತು. ನಿಮ್ಮ ಮನೆಯಲ್ಲೂ ಹೆಣ್ಣು ಮಕ್ಕಳು ಇಲ್ಲವೇ? ನಿಮ್ಮ ತಾಯಿನೂ ಓರ್ವ ಹೆಣ್ಣು? ಎಂದು ಲಕ್ಷ್ಮೀ ಹೆಬ್ಬಾಳ್ಕರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.