ಮಂಗಳೂರು : ಪಹಣಿ ಒಂದರಲ್ಲಿ ತಮ್ಮ ಹೆಸರನ್ನು ಸೇರಿಸಲು ಕಂದಾಯ ಇಲಾಖೆಯ ನಿರೀಕ್ಷಕನೊಬ್ಬ ವ್ಯಕ್ತಿಯ ಒಬ್ಬರ ಬಳಿ ನಾಲ್ಕು ಲಕ್ಷ ರೂಪಾಯಿಯ ಲಂಚಕ್ಕೆ ಬೇಡಿಕೆ ಇಟ್ಟಿದ್ದ. ಈ ಸಂದರ್ಭದಲ್ಲಿ ವ್ಯಕ್ತಿಯಿಂದ ನಾಲ್ಕು ಲಕ್ಷ ರೂಪಾಯಿ ಸ್ವೀಕರಿಸುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಕಂದಾಯ ನೀರಿಕ್ಷಕ ದಿನೇಶ್ ಎನ್ನುವ ಅಧಿಕಾರಿಯನ್ನು ವಶಕ್ಕೆ ಪಡೆದುಕೊಂಡಿರುವ ಘಟನೆ ಮಂಗಳೂರು ಜಿಲ್ಲೆಯ ಮುಲ್ಕಿಯಲ್ಲಿ ನಡೆದಿದೆ.
ಹೌದು 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಮುಲ್ಕಿ ಆರ್ ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾನೆ. ಪಹಣಿಯಲ್ಲಿ ಹೆಸರು ಸೇರಿಸಲು 4 ಲಕ್ಷ ರೂಪಾಯಿ ಲಂಚಕ್ಕೆ ಆರ್ ಐ ಬೇಡಿಕೆ ಇಟ್ಟಿದ್ದ. ಹೆಸರು ಸೇರಿಸಲು ಅರ್ಜಿ ಸಲ್ಲಿಸಿದ್ದರೂ ಕೂಡ ಒಂದು ವರ್ಷದಿಂದ ಕ್ರಮ ಕೈಗೊಂಡಿರಲಿಲ್ಲ.
ಸರ್ಕಾರಿ ಕೆಲಸಕ್ಕೆ ಕಂದಾಯ ನಿರೀಕ್ಷಕ ದಿನೇಶ್ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕುರಿತಂತೆ ಮಂಗಳೂರು ಲೋಕಾಯುಕ್ತ ಕಚೇರಿಗೆ ದೂರು ಸಲ್ಲಿಕೆಯಾಗಿತ್ತು ವ್ಯಕ್ತಿಯ ದೂರಿನ ಮೇರೆಗೆ ಲೋಕಾಯುಕ್ತ ಎಸ್ ಪಿ ನಟರಾಜ್ ನೇತ್ರತ್ವದಲ್ಲಿ ದಾಳಿ ಮಾಡಲಾಗಿದ್ದು, 4 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಂದಾಯ ನೀರಿಕ್ಷಕ ಲೋಕಾಯುಕ್ತ ಬೆಲೆಗೆ ಬಿದ್ದಿದ್ದಾನೆ.