ಹುಬ್ಬಳ್ಳಿ : ಮುಂಬರುವ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಮತ್ತು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ತೆರವುಗೊಳಿಸಲು ದಾನಾಪುರ ಮತ್ತು ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ಎರಡು ಟ್ರಿಪ್ ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲುಗಳ ಸಂಚಾರ ನಡೆಸಲು ಪೂರ್ವ ಮಧ್ಯ ರೈಲ್ವೆಯು ಸೂಚಿಸಿದೆ.
ರೈಲು ಸಂಖ್ಯೆ 03351 ದಾನಾಪುರ-ಎಸ್ಎಂವಿಟಿ ಬೆಂಗಳೂರು ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 22 ಮತ್ತು 29, 2024 ರಂದು (ಭಾನುವಾರ) ದಾನಾಪುರದಿಂದ ಮಧ್ಯಾಹ್ನ 3 ಗಂಟೆಗೆ ಹೊರಟು, ಮೂರನೇ ದಿನ (ಮಂಗಳವಾರ) ಎಸ್ಎಂವಿಟಿ ಬೆಂಗಳೂರು ನಿಲ್ದಾಣಕ್ಕೆ ಮಧ್ಯಾಹ್ನ 2:30 ಗಂಟೆಗೆ ಆಗಮಿಸಲಿದೆ.
ರೈಲು ಸಂಖ್ಯೆ 03352 ಎಸ್ಎಂವಿಟಿ ಬೆಂಗಳೂರು-ದಾನಾಪುರ ವಿಶೇಷ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 24 ಮತ್ತು 31, 2024 ರಂದು (ಮಂಗಳವಾರ) ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 11:50ಕ್ಕೆ ಹೊರಟು, ಮೂರನೇ ದಿನ (ಗುರುವಾರ) ದಾನಾಪುರ ನಿಲ್ದಾಣವನ್ನು ರಾತ್ರಿ 11:55ಕ್ಕೆ ತಲುಪಲಿದೆ.
ಈ ರೈಲು ಎರಡೂ ಮಾರ್ಗಗಳಲ್ಲಿ ಅರಾ, ಬಕ್ಸಾರ್, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್, ಪ್ರಯಾಗ್ ರಾಜ್ ಚಿಯೋಕಿ ಜಂಕ್ಷನ್, ಸತ್ನಾ, ಜಬಲ್ಪುರ್, ಇಟಾರ್ಸಿ, ನಾಗ್ಪುರ, ಸೇವಾಗ್ರಾಮ್, ಚಂದ್ರಾಪುರ, ಬಲ್ಹಾರ್ಶಾ, ವಾರಂಗಲ್, ವಿಜಯವಾಡ, ಗುಡೂರ್, ಪೆರಂಬೂರ್, ಕಟಪಾಡಿ, ಜೋಲಾರ್ ಪೆಟ್ಟೈ, ಬಂಗಾರಪೇಟೆ ಮತ್ತು ವೈಟ್ ಫೀಲ್ಡ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿವೆ. ಈ ವಿಶೇಷ ರೈಲುಗಳ ಸಂಯೋಜನೆಯು 17 ಬೋಗಿಗಳನ್ನು ಒಳಗೊಂಡಿರುತ್ತದೆ.
ಪ್ರಯಾಣಿಕರು ಅಧಿಕೃತ ವೆಬ್ಸೈಟ್ (www.enquiry.indianrail.gov.in) ಗೆ ಭೇಟಿ ನೀಡಿ, NTES ಅಪ್ಲಿಕೇಶನ್ ಬಳಸಿ ಅಥವಾ 139 ನಂಬರಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ತಿಳಿಸಿದ್ದಾರೆ.