Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM

BREAKING : ಮತ್ತೆ ಚಿನ್ನ ಗೆದ್ದ ‘ಸುಮಿತ್ ಆಂಟಿಲ್’! ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್’ನಲ್ಲಿ ಭಾರತ ಪ್ರಾಬಲ್ಯ

12/03/2026 9:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಯಲು ಸೀಮೆ ಜನರಿಗೆ ಗುಡ್ ನ್ಯೂಸ್: ಭದ್ರಾ ಮೇಲ್ದಂಡೆ ಯೋಜನೆ 2028ರ ಮಾರ್ಚ್ ಅಂತ್ಯಕ್ಕೆ ಪೂರ್ಣ
KARNATAKA

ಬಯಲು ಸೀಮೆ ಜನರಿಗೆ ಗುಡ್ ನ್ಯೂಸ್: ಭದ್ರಾ ಮೇಲ್ದಂಡೆ ಯೋಜನೆ 2028ರ ಮಾರ್ಚ್ ಅಂತ್ಯಕ್ಕೆ ಪೂರ್ಣ

By kannadanewsnow5720/12/2024 5:51 AM

ಬೆಳಗಾವಿ : ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನು ಮಾರ್ಚ್-2028ರ ಅಂತ್ಯಕ್ಕೆ ಅನುದಾನದ ಲಭ್ಯತೆಗೆ ಅನುಗುಣವಾಗಿ ಪೂರ್ಣಗೊಳಿಸಲು ಉದ್ದೇಶಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಚಳ್ಳಕೆರೆ ಶಾಸಕ ಟಿ.ರಘುಮೂರ್ತಿ ಅವರ ಕೇಳಿದ ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಯ ಪ್ರಗತಿಯ ಕುರಿತು ಚುಕ್ಕೆ ಗುರುತಿಲ್ಲದ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯನ್ನು ಮಧ್ಯ ಕರ್ನಾಟಕದ ಬರಪೀಡಿತ ಚಿಕ್ಕಮಗಳೂರು, ಚಿತ್ರದುರ್ಗ, ತುಮಕೂರು ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿನ 2,25,515 ಹೆಕ್ಟೇರ್ (5,57,022 ಎಕರೆ) ಭೂ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ಪದ್ಧತಿಯಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಲು ಹಾಗೂ 367 ಕೆರೆಗಳಿಗೆ ಅವುಗಳ ಸಾಮಾಥ್ರ್ಯದ ಶೇ.50ರಷ್ಟು ನೀರನ್ನು ತುಂಬಿಸಲು ಉದ್ದೇಶಿಸಿ ರೂಪಿಸಲಾಗಿದೆ. ಈ ಯೋಜನೆಗೆ 29.90 ಟಿಎಂಸಿ ನೀರನ್ನು (ಸೂಕ್ಷ್ಮ ನೀರಾವರಿ ಸೌಲಭ್ಯ ಕಲ್ಪಿಸಲು 21.90 ಟಿಎಂಸಿ, ಕೆರೆ ತುಂಬಿಸಲು 6 ಟಿಎಂಸಿ, ವಾಣಿ ವಿಲಾಸ ಸಾಗರಕ್ಕೆ 2 ಟಿಎಂಸಿ) ಹಂಚಿಕೆ ಮಾಡಲಾಗಿದೆ. ಈ ಯೋಜನೆಯ ರೂ.21,473.67 ಕೋಟಿ ಮೊತ್ತದ ಸಮಗ್ರ ಪುನರ್ ಪರಿಷ್ಕøತ ಯೋಜನಾ ವರಿಗೆ 2020ರ ಡಿಸೆಂಬರ್ 16ರಲ್ಲಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಯ ಕಾಮಗಾರಿಗಳಿಗೆ ಅವಶ್ಯವಿರುವ ಜಮೀನಿನ ಭೂಸ್ವಾಧೀನದ ಪ್ರಕ್ರಿಯೆಯನ್ನು ಚುರುಕುಗೊಳಿಸಿ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮವಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಕೇಂದ್ರ ಸರ್ಕಾರದಿಂದ 2023-24ನೇ ಸಾಲಿನ ಅಯವ್ಯಯದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ ರೂ.5,300 ಕೋಟಿಗಳ ಅನುದಾನ ಘೋಷಣೆ ಮಾಡಲಾಗಿರುತ್ತದೆ. ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸುವ ಪ್ರಕ್ರಿಯೆ ವಿಳಂಬವಾಗುತ್ತಿದ್ದು, ಯೋಜನೆಯನ್ನು ಅತೀ ಶೀಘ್ರವಾಗಿ ಪೂರ್ಣಗೊಳಿಸುವ ಉದ್ದೇಶದಿಂದ ರೂ.5,300 ಕೋಟಿಗಳ ಧನ ಸಹಾಯವನ್ನು ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ-ವೇಗವರ್ಧಿತ ನೀರಾವರಿ ಪ್ರಯೋಜನ ಕಾರ್ಯಕ್ರಮ ಯೋಜನೆ/ರಾಷ್ಟ್ರೀಯ ಯೋಜನೆಯಡಿ ಅಡಿ ಬಿಡುಗಡೆಗೊಳಿಸಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅನುಮೋದನೆ ನಿರೀಕ್ಷಿಸಲಾಗಿದೆ.
ಆರ್ಥಿಕ ಪ್ರಗತಿ: ಭದ್ರ ಮೇಲ್ದಂಡೆ ಯೋಜನೆಗಾಗಿ 2024-25ನೇ ಸಾಲಿನಲ್ಲಿ ರೂ.1430 ಕೋಟಿಗಳ ಅನುದಾನ ಹಂಚಿಕೆಯಾಗಿದ್ದು, 2024ರ ಅಕ್ಟೋಬರ್ ಅಂತ್ಯಕ್ಕೆ ಒಟ್ಟಾರೆ ಸಂಚಿತ ರೂ.10,115.13 ಕೋಟಿಗಳ ಆರ್ಥಿಕ ಪ್ರಗತಿ ಸಾಧಿಸಲಾಗಿದೆ.

ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರಕ್ಕೆ ಶಿಫಾರಸ್ಸು: ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಶಿಫಾರಸ್ಸು ಮಾಡಲಾಗಿದೆ. ಭದ್ರಾ ಮೇಲ್ದಂಡೆ ಯೋಜನೆಯು ತಾಂತ್ರಿಕವಾಗಿ ಹಾಗೂ ಆರ್ಥಿಕವಾಗಿ ಕಾರ್ಯಸಾಧ್ಯತೆಯ ಬಗ್ಗೆ ಕೇಂದ್ರ ಸರ್ಕಾರದ ಜಲಶಕ್ತಿ ಮಂತ್ರಾಲಯದ ತಾಂತ್ರಿಕ ಸಲಹಾ ಸಮಿತಿಯು ತೀರುವಳಿ ನೀಡಿರುತ್ತದೆ. ಕೇಂದ್ರದ ಇನ್‍ವೆಸ್ಟ್‍ಮೆಂಟ್ ಕ್ಲಿಯರೆನ್ಸ್ ಸಮಿತಿಯು ರೂ.16,125.48 ಕೋಟಿಗಳ ಯೋಜನಾ ಮೊತ್ತಕ್ಕೆ ಸ್ಥಿರೀಕರಿಸಿ ಅನುಮೋದನೆ ನೀಡಿದೆ. 2022ರ ಫೆ.15ರ ಕೇಂದ್ರದ ಹೈ ಪವರ್ಡ್ ಸ್ಟ್ರೀಂಗ್ ಕಮಿಟಿಯ 14ನೇ ಸಭೆಯು ಮಾಡಿದ ಶಿಫಾರಸ್ಸಿನಂತೆ ಕೇಂದ್ರ ಹಣಕಾಸು ಸಚಿವಾಲಯದ ಪಬ್ಲಿಕ್ ಇನ್‍ವೆಸ್ಟ್‍ಮೆಂಟ್ ಬೋರ್ಡ್ ಮಂಡಳಿಯು ಪ್ರಸ್ತಾವನೆ ಅಂಗೀಕರಿಸಿ ಭದ್ರಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸಚಿವ ಸಂಪುಟ ಸಭೆಗೆ ಅನುಮೋದನೆಗೆ ಶಿಫಾರಸ್ಸು ಮಾಡಿದೆ.

ರಾಣಿಕೆರೆಗೆ ವೇದಾವತಿ ನದಿ ನೀರು: ಚಳ್ಳಕೆರೆ ತಾಲ್ಲೂಕಿನ ರಾಣಿಕೆರೆಗೆ ವೇದಾವತಿ ನದಿಯ ನೀರನ್ನು 39 ಕಿ.ಮೀ ನಾಲೆಯ ಮುಖಾಂತರ ಹರಿಸುವ ಯೋಜನೆಯನ್ನು ಕರ್ನಾಟಕ ನೀರಾವರಿ ನಿಗಮದಿಂದ ವಿಶ್ವೇಶ್ವರಯ್ಯ ಜಲನಿಗಮಕ್ಕೆ ಅನುದಾನ ಸಹಿತ ಹಸ್ತಾಂತರಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿದೆ.

ಚಳ್ಳಕೆರೆ ಮತ್ತು ಮೊಳಕಾಲ್ಮುರು ವಿಧಾನಸಭಾ ಕ್ಷೇತ್ರಗಳಿಗೆ ಸೇರಿರುವ 23,888 ಹೆಕ್ಟೇರ್ ಪ್ರದೇಶಕ್ಕೆ ಸೂಕ್ಷ್ಮ ನೀರಾವರಿ ವ್ಯವಸ್ಥೆ ಕಲ್ಪಿಸುವ ಚಿತ್ರದುರ್ಗ ಶಾಖಾ ಕಾಲುವೆ (ಬ್ಲಾಕ್-9) ಮತ್ತು (ಬ್ಲಾಕ್-11) ಕಾಮಗಾರಿಗಳ ಅಂದಾಜು ಪಟ್ಟಿಗಳು ವಿಶ್ವೇಶ್ವರಯ್ಯ ಜಲನಿಗಮದ ಹಂತದಲ್ಲಿ ಪರಿಶೀಲನೆಯಲ್ಲಿದೆ. ಭದ್ರಾ ಮೇಲ್ದಂಡೆ ಯೋಜನೆಯಡಿಯಲ್ಲಿನ ಸೂಕ್ಷ್ಮ ನೀರಾವರಿ ಕಲ್ಪಿಸುವ ಕಾಮಗಾರಿಗಳು ವಿವಿಧ ಹಂತದಲ್ಲಿ ಪ್ರಗತಿಯಲ್ಲಿವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

BIG NEWS: Good news for the people of the plains of the state: 'Upper Bhadra project' to be completed by March 2028
Share. Facebook Twitter LinkedIn WhatsApp Email

Related Posts

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM2 Mins Read
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM1 Min Read

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM1 Min Read
Recent News

ಯುದ್ಧದಿಂದಾಗಿ ಜಗತ್ತು ತೀವ್ರ ಇಂಧನ ಬಿಕ್ಕಟ್ಟು ಎದುರಿಸ್ತಿದೆ, ಭಾರತ ಸಾಧ್ಯವಿರುವ ಎಲ್ಲವನ್ನೂ ಮಾಡ್ತಿದೆ : ಪ್ರಧಾನಿ ಮೋದಿ

12/03/2026 10:11 PM

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

12/03/2026 9:44 PM

BREAKING : ಮತ್ತೆ ಚಿನ್ನ ಗೆದ್ದ ‘ಸುಮಿತ್ ಆಂಟಿಲ್’! ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಗ್ರ್ಯಾಂಡ್ ಪ್ರಿಕ್ಸ್’ನಲ್ಲಿ ಭಾರತ ಪ್ರಾಬಲ್ಯ

12/03/2026 9:40 PM
vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM
State News
KARNATAKA

ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು: ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ

By kannadanewsnow0912/03/2026 9:44 PM KARNATAKA 2 Mins Read

ಶಿವಮೊಗ್ಗ:  ಅವಕಾಶ ಸಿಕ್ಕಾಗ ಅಭಿವೃದ್ಧಿ ಕೆಲಸಗಳನ್ನು ಪ್ರಾಮಾಣಿಕವಾಗಿ ಮಾಡಬೇಕು ಒಳ್ಳೆಯ ಕೆಲಸ ಡಂಗೂರ ಸಾರಿಕೊಂಡು ಹೋಗಲು ಬರುವುದಿಲ್ಲ. ಇಂತಹ ಮಾದರಿ…

vidhana soudha

ಸನ್ನಡತೆ ಆಧಾರದ ಮೇಲೆ ರಾಜ್ಯದ ವಿವಿಧ ಜೈಲಿನಿಂದ 31 ಕೈದಿಗಳ ಬಿಡುಗಡೆಗೆ ಸರ್ಕಾರ ಆದೇಶ

12/03/2026 9:32 PM

ರಾಜ್ಯ ಸಚಿವ ಸಂಪುಟ ಸಭೆ: ಮೈಶುಗರ್ ಪುನಶ್ಚೇತನಕ್ಕೆ ₹60 ಕೋಟಿ, ಸೂರ್ಯನಗರದಲ್ಲಿ ಕ್ರೀಡಾಂಗಣಕ್ಕೆ ಅನುಮೋದನೆ

12/03/2026 9:30 PM

ಪುರುಷರು ಮಾಡುವ ಈ 5 ಸಣ್ಣ ತಪ್ಪುಗಳೇ `ವಿಚ್ಛೇದನಕ್ಕೆ’ ಕಾರಣವಾಗಬಹುದು!

12/03/2026 9:27 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.