ಬೆಂಗಳೂರು : 2024-25ನೇ ಸಾಲಿನಲ್ಲಿ ಮೆಟ್ರಿಕ ನಂತರದ ಕೋರ್ಸಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ ಸ್ನಾತಕೋತ್ತರ ಪದವಿ, ವೃತ್ತಿ ಪರ ಪದವಿ ಹಾಗೂ ವೃತ್ತಿ ಪರ ಸ್ನಾತಕೋತ್ತರ ಪದವಿಗಳ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಮೆಟ್ರಿಕ-ನಂತರದ ವಿದ್ಯಾರ್ಥಿವೇತನ, ಶುಲ್ಕ ಮರುಪಾವತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಲು ಡಿಸೆಂಬರ್ 20 ಇಂದು ಕೊನೆಯ ದಿನವಾಗಿದೆ.
ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಡಿ.20 2024 ರವರೆಗೆ ವಿಸ್ತರಿಸಲಾಗಿತ್ತು. ಅಂತೆಯೇ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ದೂರವಾಣಿ ಸಂಖ್ಯೆ: 8050770005, ಅಥವಾ bcwdhelpline@gmail.com ಗೆ ಭೇಟಿ ನೀಡಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.