ಬೆಳಗಾವಿ: ರಾಜ್ಯ ಸರ್ಕಾರವು ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದ್ದು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಬಿಜೆಪಿಯ ಸಿ.ಸಿ. ಪಾಟೀಲ್ ಪರವಾಗಿ ಸುನಿಲ್ ಕುಮಾರ್ ಕೇಳಿದ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಮಧು ಬಂಗಾರಪ್ಪ ಅವರು, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬೇಡಿಕೆ ಈಡೇರಿಸಲು ಹಣಕಾಸು ಇಲಾಖೆ ಒಪ್ಪಿಗೆ ನೀಡಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಸುನಿಲ್ ಕುಮಾರ್ ವಿಷಯ ಪ್ರಸ್ತಾಪಿಸಿ, ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಮಾಸಿಕ 12 ಸಾವಿರ ರೂಪಾಯಿ ಗೌರವಧನ ನಿಗದಿಪಡಿಸಿದದ್ದು, ಕನಿಷ್ಠ ವೇತನಕ್ಕಿಂತಲೂ ಕಡಿಮೆ ಇದೆ. ಎಂದರು ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಮಧು ಬಂಗಾರಪ್ಪ, ಹಣಕಾಸು ಇಲಾಖೆ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಳ ಪ್ರಸ್ತಾವನೆ ತಿರಸ್ಕರಿಸಿದೆ. ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡುವ ಸಂಬಂಧ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.