ಬೆಳಗಾವಿ : ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಅವರು ಹೇಳಿದ ಆ ಪದ ನನ್ನ ಬಾಯಿಯಿಂದ ಹೇಳಲು ಕಷ್ಟವಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕಣ್ಣೀರಿಟ್ಟಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿ.ಟಿ. ರವಿ ಅವರ ಹೇಳಿದ ಕೆಟ್ಟ ಪದವನ್ನು ನನ್ನ ಬಾಯಿಯಿಂದ ಹೇಳಲು ಕಷ್ಟವಾಗುತ್ತಿದೆ. ಹೀಗಾಗಿ ಪರಿಷತ್ ಹೋಗಿ ನಾನು ಕುಳಿದುಕೊಂಡೆ. ಸಿ.ಟಿ. ರವಿ ಅವರು ರಾಹುಲ್ ಗಾಂಧಿ ಡ್ರಗ್ ಅಡಿಕ್ಟ್ ಅಂತ ಹೇಳುತ್ತಿದ್ರು. ಆಗ ನಾನು ನೀವು ಅಪಘಾತದಲ್ಲಿ ಇಬ್ಬರನ್ನು ಕೊಂದಿದ್ದೀರಿ ಹಾಗಾದ್ರೆ ನೀವು ಕೊಲೆಗಾರರಾ? ಅಂತ ಕೇಳಿದೆ. ಅಷ್ಟೇ ಅವರು ಆ ಕೆಟ್ಟ ಪದ ಬಳಕೆ ಮಾಡಿದ್ರೂ ಅಂತ ಕಣ್ಣೀರಿಟ್ಟಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.