ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಅರೆಸ್ಟ್ ಆಗಿರುವ ಬಿಜೆಪಿ ಎಂ.ಎಲ್.ಸಿ ಸಿ.ಟಿ. ರವಿ ಅವರನ್ನು ಬೆಳಗಾವಿ ಕೋರ್ಟ್ ಗೆ ಪೊಲೀಸರು ಕರೆದುಕೊಂಡು ಬಂದಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.
ಇದೀಗ ಸಿಟಿ ರವಿ ಅವರನ್ನು ಹಿರಿಯ ಬಾಗೇವಾಡಿ ಪೊಲೀಸರು ವಶಕ್ಕೆ ಪಡೆದುಕೊಂಡು ಅರೆಸ್ಟ್ ಮಾಡಿದ್ದು,ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಗೆ ಕರೆತಂದಿದ್ದು, ಜಡ್ಜ್ ಮುಂದೆ ಹಾಜರಾಗಿದ್ದಾರೆ.