ಬೆಳಗಾವಿ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿದ ಹಿನ್ನೆಲೆಯಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಅವರನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ.
ಇಂದು ಬೆಳಗ್ಗೆ ಸಿ.ಟಿ. ರವಿ ಅವರನ್ನು ಬೆಳಗಾವಿಯ ಜೆಎಂಎಫ್ ಸಿ ಕೋರ್ಟ್ ಪೊಲೀಸರು ಹಾಜರುಪಡಿಸಿದ್ದು, ಸಿ.ಟಿ ರವಿ ಪರ ವಕೀಲ ಎಂ.ಬಿ ಜಿರಲಿ ವಾದ ಮಾಡಿದ್ದಾರೆ. ಈ ವೇಳೆ ನ್ಯಾಯಾಧೀಶರ ಎದುರು ಸಿ.ಟಿ.ರವಿ ಅವರು ನನಗೆ ಖಾನಾಪುರದ ಬಳಿ ಹೊಡೆದಿದ್ದಾರೆ. ತಲೆಯಲ್ಲಿ ರಕ್ತ ಬರುತ್ತಿತ್ತು. ಆದರೆ ಯಾರು ಹೊಡೆದಿದ್ದಾರೆ ಅಂತ ಗೊತ್ತಾಗಲಿಲ್ಲ. ನನಗೆ ಮಾನಸಿಕವಾಗಿ, ದೈಹಿಕವಾಗಿ ಹಿಂಸೆ ಕೊಟ್ಟಿದ್ದಾರೆ. ಘಟನೆ ನಡೆದು 3 ಗಂಟೆ ಬಳಿಕ ನನಗೆ ಚಿಕಿತ್ಸೆ ಕೊಟ್ಟಿದ್ದಾರೆ. ಸ್ಮಾರ್ಟ್ ವಾಚ್ ನಲ್ಲಿ ಮಾತನಾಡುತ್ತಿದ್ದೆ. ಈ ವೇಳೆ ವಾಚ್ ಅನ್ನು ಕಿತ್ತುಕೊಳ್ಳೋಕೆ ಪ್ರಯತ್ನ ಪಟ್ಟಿದ್ದಾರೆ. ಪ್ರತಿ 10 ನಿಮಿಷಕ್ಕೆ ಕಾಲ್ ಯಾರದ್ದೋ ಕಾಲ್ ಬರುತ್ತಿತ್ತು. ಅವರ ಸೂಚನೆಯಂತೆ ವರ್ತಿಸುತ್ತಿದ್ದರು ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ.
ನನಗೆ ಯಾಕೆ ಅರೆಸ್ಟ್ ಮಾಡಿದ್ದಾರೆ ಎಂದು ಗೊತ್ತಿಲ್ಲ. ನಾನು ಕೂಡ ಕೇಳಿದ್ರೂ ಪೊಲೀಸರು ಉತ್ತರ ಹೇಳಲಿಲ್ಲ. ಯಾವ ಕಾರಣಕ್ಕೆ ಅರೆಸ್ಟ್ ಮಾಡಿದ್ರೂ ಅಂತ ತಿಳಿಯಲಿಲ್ಲ ಎಂದು ಸಿ.ಟಿ. ರವಿ ಹೇಳಿದ್ದಾರೆ.
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಅವಾಚ್ಯ ಪದ ಬಳಕೆ ಮಾಡಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಠಾಣೆಯಲ್ಲಿ BNS ಕಾಯ್ದೆ 75 ಮತ್ತು 79ರ ಅಡಿ ಕಾಯ್ದೆ, ಲೈಂಗಿಕ ಕಿರುಕುಳ, ಮಹಿಳಾ ಇಚ್ಛೆ ವಿರುದ್ಧ, ಅಶ್ಲೀಲತೆ ತೋರುವುದು, ಲೈಂಗಿಕ ಬಣ್ಣದ ಬಗ್ಗೆ ಟೀಕೆ ಹಾಗೂ ಮಹಿಳೆಯ ನಮ್ರತೆ, ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಅಥವಾ ಕ್ರಿಯೆ ಸೆಕ್ಷನ್ 75 ಲೈಂಗಿಕ ಕಿರುಕುಳ ನೀಡಿದ ಆರೋಪ ಸೆಕ್ಷನ್ 79 ಅವಮಾನಿಸುವ ಉದ್ದೇಶದಿಂದ ಸನ್ನೆ ಪದ ಕ್ರಿಯೆ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಸಿ ಟಿ ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.