ಬೆಂಗಳೂರು : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಕುರಿತು ಅವಾಚ್ಯ ಪದ ಬಳಸಿ ನಿಂದಿಸಿದ ಆರೋಪದ ಹಿನ್ನೆಲೆಯಲ್ಲಿ ನಿನ್ನೆ ಬಿಜೆಪಿಯ ಮೇಲೆ ಸಿಟಿ ರವಿ ಅವರನ್ನು ಬೆಳಗಾವಿಯ ಹಿರೇಬಾಗೇವಾಡಿಯ ಪೊಲೀಸರು ಬಂಧಿಸಿದ್ದರು. ಇಂದು ಬೆಳಗಾವಿಯ ಜೆಎಂಎಫ್ಸಿ ಕೋರ್ಟಿಗೆ ಹಾಜರುಪಡಿಸಿದ ಬಳಿಕ ನ್ಯಾಯಾಧೀಶರು ಸಿಟಿ ರವಿ ಪರ ವಕೀಲ ಎಂಬಿ ಜಿರಲಿ ಅವರ ವಾದ ಆಲಿಸಿದರು. ನಂತರ ಮಧ್ಯಾಹ್ನ 3 ಗಂಟೆಗೆ ವಿಚಾರಣೆಯನ್ನು ಮುಂದೂಡಿದರು.
ಇದೀಗ ಸಿಟಿ ರವಿ ಯಾರು ಬೆಂಗಳೂರಿನ ಸೇಷನ್ಸ್ ಕೋರ್ಟ್, ಜನಪ್ರತಿನಿಧಿಗಳ ನ್ಯಾಯಾಲಯಕ್ಕೂ ಕೂಡ ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಹೌದು ಬೆಂಗಳೂರಿನ ಸೇಷನ್ಸ್ ಕೋರ್ಟ್ ಗೂ ಸಹ ಸಿಟಿ ರವಿ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದು, ಜಾಮೀನು ಕೋರಿ ಸೆಷನ್ ಕೋರ್ಟಿಗೆ ಇದೀಗ ಅರ್ಜಿ ಸಲ್ಲಿಸಿದ್ದಾರೆ ಎಂದು ತಿಳಿದು ಬಂದಿದೆ.ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಪ್ರತ್ಯೇಕ ಸೆಕ್ಷನ್ ಅಡಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಸಿಟಿ ರವಿ ಪರ ಶ್ರೀನಿವಾಸ್ ರಾವ್ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ಮಧ್ಯಾಹ್ನ 3 ಗಂಟೆಗೆ ವಿಚಾರಣೆ ನಡೆಯುವ ಸಾಧ್ಯತೆ ಇದೆ. BNS ಕಾಯ್ದೆ ಸೆಕ್ಷನ್ 75 ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ.
ಈಗಾಗಲೇ ಸಿಟಿ ರವಿ ಅವರನ್ನು ಬಂಧಿಸಿದ್ದನ್ನು ಖಂಡಿಸಿ ಚಿಕ್ಕಮಂಗಳೂರು ಜಿಲ್ಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ಮಾಡುತ್ತಿದ್ದು ಅಲ್ಲದೆ, ಸಿಟಿ ರವಿ ಹೇಳಿಕೆಯನ್ನು ಖಂಡಿಸಿ ಕೂಡ ಇತ್ತ ಕಾಂಗ್ರೆಸ್ ಕಾರ್ಯಕರ್ತರು ಕೂಡ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ.