ಮಹಾರಾಷ್ಟ್ರ: ಇಂದು ಖಾಸಗಿ ಬಸ್ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದರೇ, ಹಲವರು ಗಾಯಗೊಂಡಿದ್ದಾರೆ.
ಮಹಾರಾಷ್ಟ್ರದ ರಾಯಗಢ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ 5 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವರಿಗೆ ಗಾಯಗೊಂಡಿರುವಂತ ಘಟನೆ ನಡೆದಿರುವುದಾಗಿ ತಿಳಿದು ಬಂದಿದೆ.
ಈ ವಿಷಯ ತಿಳಿದಂತ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದು ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳೀಯರ ನೆರವಿನೊಂದಿಗೆ ರವಾನಿಸಿ, ಚಿಕಿತ್ಸೆ ಕೊಡಿಸುವಂತ ವ್ಯವಸ್ಥೆ ಮಾಡಿದ್ದಾರೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration