ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕುರಿತು ಅಶ್ಲೀಲ ಪದ ಬಳಕೆ ಸಂಬಂಧ ದಾಖಲಾಗಿದ್ದಂತ ಎಫ್ಐಆರ್ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಂಧಿಸಲಾಗಿತ್ತು. ಜಾಮೀನು ಕೋರಿ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಪರಿಷತ್ ಸದಸ್ಯ ಸಿ.ಟಿ ರವಿ ಅವರನ್ನು ಬಿಡುಗಡೆಗೆ ಆದೇಶಿಸಿದೆ.
ಬೆಳಗಾವಿಯ ಜೆಎಂಎಫ್ ಸಿ ನ್ಯಾಯಾಲಯವು ಪರಿಷತ್ ಸದಸ್ಯ ಸಿ.ಟಿ ರವಿ ಅವರು ತಮ್ಮ ಬಂಧನದ ನಂತ್ರ ಜಾಮೀನಿಗಾಗಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಿ, ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿತ್ತು. ಹೀಗಾಗಿ ಸಿ.ಟಿ ರವಿ ಅವರನ್ನು ಬಿಗಿ ಪೊಲೀಸ್ ಭದ್ರತೆಯಲ್ಲಿ ಬೆಂಗಳೂರಿಗೆ ರಸ್ತೆ ಮಾರ್ಗದ ಮೂಲಕ ಕಾರಿನಲ್ಲಿ ಕರೆತರಲಾಗುತ್ತಿದೆ.
ಇದಕ್ಕೂ ಮುನ್ನವೇ ಹೈಕೋರ್ಟ್ ಗೆ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ ಅವರು ಜಾಮೀನಿಗಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು, ಅವರನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶಿಸಿದೆ. ಈ ಮೂಲಕ ಬಿಜೆಪಿ ಪರಿಷತ್ ಸದಸ್ಯ ಸಿ.ಟಿ ರವಿ ಅವರಿಗೆ ಬಿಗ್ ರಿಲೀಫ್ ನೀಡಿದೆ.
ನೀವು ಜವಾಬ್ದಾರಿ ಉಪಮುಖ್ಯಮಂತ್ರಿಯೋ.? ‘ರೌಡಿ ಗ್ಯಾಂಗ್’ನ ಮುಖ್ಯಸ್ಥನೋ.?: ಜೆಡಿಎಸ್ ಪ್ರಶ್ನೆ
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration
ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ