ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ ಎನ್ನುವಂತೆ 2024ರ ದ್ವತೀಯ ಅಧಿವೇಶನ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದ್ದು, 2024ರ ದ್ವಿತೀಯ ಅಧಿವೇಶನದ ಇಲಾಖಾ ಪರೀಕ್ಷೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 30-12-2024ರಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29-01-2025 ಆಗಿರುತ್ತದೆ. ಶುಲ್ಕ ಪಾವತಿಸಲು ಕೊನೆಯ ದಿನ 31-01-2025 ಆಗಿರುತ್ತದೆ ಎಂದಿದೆ.
ಇಲಾಖಾ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್ ಸೈಟ್ www.kpsc.kar.nic.in ಗೆ ಭೇಟಿ ನೀಡಿ ಸಲ್ಲಿಸುವಂತೆ ಸೂಚಿಸಿದೆ.
BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!