ಬೆಂಗಳೂರು: 2025ನೇ ಸಾಲಿನ ರಾಜ್ಯ ಮಟ್ಟದ ಗಣರಾಜ್ಯೋತ್ಸವ ಆಚರಣೆಗೆ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
2025ನೇ ಸಾಲಿನ ಗಣರಾಜ್ಯೋತ್ಸವ ದಿನಾಚರಣೆಯ ಸಂಬಂಧ ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ ನಡೆಯಲಿದ್ದು, ಅದಕ್ಕೆ ಬೇಕಾದ ವ್ಯವಸ್ಥೆ ಸರಿಯಾಗಿ ಮಾಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕಾರ್ಯಕ್ರಮದ ದಿನ ಆವರಣಕ್ಕೆ ಬರುವ ಅತೀ ಗಣ್ಯರು, ಗಣ್ಯರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ಯಾವ ದ್ವಾರದಲ್ಲಿ ಬರಬೇಕು ಹಾಗೂ ವಾಹನಗಳ ಪಾರ್ಕಿಂಗ್ ಸ್ಥಳ ವಿಚಾರವಾಗಿ ಯಾವುದೇ ಲೋಪಗಳಾಗದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.
ಕಾರ್ಯಕ್ರಮದ ವೇಳೆ ತಾತ್ಕಾಲಿಕ ಶೌಚಾಲಯಗಳ ವ್ಯವಸ್ಥೆ, ಅಗ್ನಿ ಶಾಮಕ ವ್ಯವಸ್ಥೆ, ಪೊಲೀಸ್ ಬಂದೋಬಸ್ತ್, ಆಸನಗಳ ವ್ಯವಸ್ಥೆ ಸೇರಿದಂತೆ ಇನ್ನಿತರೆ ವ್ಯವಸ್ಥೆಗಳನ್ನು ಸರಿಯಾಗಿ ಮಾಡಲು ನಿರ್ದೇಶನ ನೀಡಿದರು.
ಪ್ರತಿ ವರ್ಷದಂತೆ ಗಣರಾಜ್ಯೋತ್ಸವ ಸಮಾರಂಭದಲ್ಲಿ ಶಿಷ್ಟಾಚಾರದ ಅನ್ವಯ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕೆಂದು ಸೂಚನೆ ನೀಡಿದರು.
ಸಭೆಯಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿಯಾದ ಜಗದೀಶ್, ಆಡಳಿತ ವಿಭಾಗದ ವಿಶೇಷ ಆಯುಕ್ತರಾದ ಅವಿನಾಶ್ ಮೆನನ್ ರಾಜೇಂದ್ರನ್, ಉಪ ಆಯುಕ್ತರಾದ ಮಂಜುನಾಥಸ್ವಾಮಿ, ಪೊಲೀಸ್, ಬೆಸ್ಕಾಂ, ಲೋಕೋಪಯೋಗಿ, ಜಲಮಂಡಳಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಹಾಜರಿದ್ದರು.
BIG NEWS: ನೀರು ಕೊಡಲಿಲ್ಲ, ಮೂತ್ರಕ್ಕೂ ಅವಕಾಶ ನೀಡಲಿಲ್ಲ: MLC ಸಿ.ಟಿ.ರವಿ | CT Ravi
BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ
BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!