ಶಿವಮೊಗ್ಗ : ಈಗಿನ ಮಕ್ಕಳ ಮನಸ್ಸು ಬಹಳ ಸೂಕ್ಷ್ಮವಾಗಿದ್ದು, ಪೋಷಕರು ಸ್ವಲ್ಪ ಬೈದರು ಸಾಕು ಏನಾದರೂ ಒಂದು ತಮ್ಮ ಜೀವಕ್ಕೆ ಕುತ್ತು ತಂದುಕೊಳ್ಳುವಂತಹ ಕೆಲಸ ಮಾಡಿಕೊಳ್ಳುತ್ತಾರೆ. ಇದೀಗ ಶಿವಮೊಗ್ಗದಲ್ಲೂ ಕೂಡ ಇಂಥ ಘಟನೆ ನಡೆದಿದ್ದು, ರಿಮೋಟ್ ಗಾಗಿ ಗಲಾಟೆ ನಡೆದು, ಈ ವೇಳೆ ಅಜ್ಜಿ ಮೊಮ್ಮಕ್ಕಳಿಗೆ ಬೈದಿದ್ದರಿಂದ ಯುವತಿ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಹೌದು ಈ ಒಂದು ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಸೂಳೆಬೈಲಿನಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಸಹನಾ (16) ಎಂದು ಗುರುತಿಸಲಾಗಿದೆ. ಟಿವಿ ರಿಮೋಟ್‍ಗಾಗಿ ಮಕ್ಕಳ ನಡುವೆ ಗಲಾಟೆ ನಡೆದಿದೆ. ಈ ವೇಳೆ ಮೊಮ್ಮಗಳಿಗೆ ಅಜ್ಜಿ ಬೈದಿದ್ದಾರೆ. ಇದಕ್ಕಾಗಿ ಮನನೊಂದು ಬಾಲಕಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ತಿಳಿದು ಬಂದಿದೆ. ಈ ಕುರಿತು ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.