ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇದ್ದಂತ 1000 ಗ್ರಾಮ ಆಡಳಿತಾಧಿಕಾರಿ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ ಕೀ ಉತ್ತರ, ಕಟ್ ಆಫ್ ಅಂಕ, ತಾತ್ಕಾಲಿಕ ಆಯ್ಕೆ ಪಟ್ಟಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಬಳಿಕ ಈಗ 1:3 ಅನುಪಾತದಡಿ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಜ.6ರಿಂದ ಆರಂಭಗೊಳ್ಳಲಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಗ್ರಾಮ ಆಡಳಿತ ಅಧಿಕಾರಿ, ನೇರನೇಮಕಾತಿ ಆಯ್ಕೆ ಸಮಿತಿಯವರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಅದರಂತೆ ಶಿವಮೊಗ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಒಟ್ಟು 31 ಗ್ರಾಮ ಅಡಳಿತ ಅಧಿಕಾರಿ ಹುದ್ದೆಗಳಿಗೆ ಒಟ್ಟು 1288 ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿರುತ್ತದೆ. ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021 ರಂತೆ ಅರ್ಹತೆ ಪಡೆದಿರುವ ಒಟ್ಟು 1288 ಅಭ್ಯರ್ಥಿಗಳ ಪೈಕಿ ಈಗಾಗಲೇ ಅನುಮೋದನೆಯಾಗಿರುವ ಹುದ್ದೆಗಳಿಗೆ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಶಿವಮೊಗ್ಗ ಜಿಲ್ಲಾ ವೆಬ್ ಸೈಟ್ https://shivamogga.nic.in ರಲ್ಲಿ ಪ್ರಕಟಿಸಲಾಗಿದೆ ಎಂದು ಹೇಳಿದ್ದಾರೆ.
ಅಭ್ಯರ್ಥಿಗಳು ಕೋರಿರುವ ವಿವಿಧ ಮೀಸಲಾತಿಗಳಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು (ನಿಗದಿತ ದಿನಾಂಕದೊಳಗೆ ಪಡೆಯಲಾದ) ಹಾಗೂ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು ಮತ್ತು ಪ್ರಮಾಣ ಪತ್ರಗಳನ್ನು ಪರಿಶೀಲನೆಗಾಗಿ ದಿನಾಂಕ: 06.01.2025 ರಿಂದ 07.01.2025 ರವರೆಗೆ ಶಿವಮೊಗ್ಗ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಸಮಯ 11:00 ಘಂಟೆ ಯಿಂದ ಸಂಜೆ 5:00 ಘಂಟೆ ರೂಳಗಾಗಿ ಖುದ್ದಾಗಿ ಹಾಜರಾಗಿ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವುದು, ಗೈರು ಹಾಜರಾದಲ್ಲಿ ಎರಡನೇ ಅವಕಾಶವನ್ನು ನೀಡಲಾಗುವುದಿಲ್ಲ ಎಂದು ತಿಳಿಸಿದ್ದಾರೆ.
GM_Ex service 02 ಅಭ್ಯರ್ಥಿಗಳು ಮತ್ತು SC PH 01 ಅಭ್ಯರ್ಥಿ ಮತ್ತು 2A_PH 01 ಅಭ್ಯರ್ಥಿ ಅನುಪಾತದಲ್ಲಿ ಲಭ್ಯವಿಲ್ಲದಿರುವುದರಿಂದ 89 ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದಾಗಿ ಹೇಳಿದ್ದಾರೆ.
BREAKING : ಗದಗದಲ್ಲಿ ಭೀಕರ ಮರ್ಡರ್ : ಮನೆಗೆ ನುಗ್ಗಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕಿಯ ಬರ್ಬರ ಹತ್ಯೆ!
BREAKING: ಸಾಗರದಲ್ಲಿ ಉಪನ್ಯಾಸಕರ ಮೇಲೆ ವಿದ್ಯಾರ್ಥಿಗಳು ಪೋಷಕರಿಂದ ಮಾರಣಾಂತಿಕ ಹಲ್ಲೆ