ಬೆಂಗಳೂರು : ನಿನ್ನೆ ಬೆಂಗಳೂರಿನ ನೆಲಮಂಗಲದ ಬಳಿ ಕಂಟೇನರ್ ಬಿದ್ದು 6 ಜನರು ದಾರುಣವಾಗಿ ಸಾವನ್ನಪ್ಪಿದ್ದರು. ಈ ಘಟನೆ ಮಾಸುವ ಮುನ್ನವೇ ಇದೀಗ ಬೆಂಗಳೂರಿನ ಸಿಂಗಸಂದ್ರ ಬಳಿ ಫ್ಲೈ ಓವರ್ ತಡೆಗೋಡೆಗೆ ಕಾರು ಡಿಕ್ಕಿಯಾಗಿ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ ಬೆಂಗಳೂರಿನ ಸಿಂಗಸಂದ್ರ ಸಮೀಪ ಈ ಒಂದು ಅಪಘಾತ ಸಂಭವಿಸಿದೆ.
ಎಲೆಕ್ಟ್ರಾನಿಕ್ ಸಿಟಿಯಿಂದ ಸಿಲ್ಕ್ ಬೋರ್ಡ್ ಕಡೆಗೆ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ತೆರಳುತ್ತಿದ್ದ ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ. ಎಲೆಕ್ಟ್ರಾನಿಕ್ ಸಿಟಿ ಖಾಸಗಿ ಆಸ್ಪತ್ರೆಯಲ್ಲಿ ಸದ್ಯ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.ಹೆಚ್ಚಿನ ಚಿಕಿತ್ಸೆಗಾಗಿ ಸಂಜಯ್ ಗಾಂಧಿ ಆಸ್ಪತ್ರೆಗೆ ಗಾಯಾಳುಗಳನ್ನು ಶಿಫ್ಟ್ ಮಾಡಲಾಯಿತು.
ಓವರ್ ಸ್ವೀಟ್ ನಿಂದ ಚಾಲಕನ ನಿಯಂತ್ರಣ ತಪ್ಪಿ ತಡೆಗೋಡೆಗೆ ಕಾರುಡಿಕ್ಕಿ ಹೊಡೆದಿದೆ. ನಾಲ್ವರು ಯುವಕರು ಹಾಗೂ ಓರ್ವ ಯುವತಿ ಟ್ರಿಪ್ ಮುಗಿಸಿ ವಾಪಸ್ ಆಗುತ್ತಿದ್ದರು, ಯುವತಿ ತಂಜಿ, ಮೊಹಮ್ಮದ್, ಸಾಹಿಲ್, ಅಬ್ದುಲ್ ಹಾಗೂ ಸಿದ್ದರ್ ಎಂದು ತಿಳಿದುಬಂದಿದೆ.