ಮಡಿಕೇರಿ : ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ, ಬೆಂಗಳೂರು ಇವರ ಮುಖಾಂತರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗಿರುತ್ತದೆ.
ಕೊಡಗು ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಹುದ್ದೆಗಳ ಪೈಕಿ 06 ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ 1:3 ಅನುಪಾತದಲ್ಲಿ ಮೂಲ ದಾಖಲೆಗಳ ಪರಿಶೀಲನೆಗಾಗಿ ತಾತ್ಕಾಲಿಕ ಪರಿಶೀಲನಾ ಪಟ್ಟಿ (Provisional verifivation list) ನ್ನು ಡಿಸೆಂಬರ್, 20 ರಂದು ಕೊಡಗು ಜಿಲ್ಲಾ ವೆಬ್‍ಸೈಟ್ http://kodagu.nic.in ನಲ್ಲಿ ಪ್ರಕಟಿಸಲಾಗಿದೆ.
ಈ ಪಟ್ಟಿಯಲ್ಲಿ ಆಯ್ಕೆಯಾಗಿರುವ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳ ಪರಿಶೀಲನೆಗೆ 2025 ರ ಜನವರಿ, 08 ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿಯ ಕಚೇರಿ ಸಭಾಂಗಣದಲ್ಲಿ ಹಾಜರಾಗಲು ತಿಳಿಸಿದೆ. ಹೆಚ್ಚಿನ ಮಾಹಿತಿಗೆ ಕೊಡಗು ಜಿಲ್ಲಾಧಿಕಾರಿಯವರ ಕಚೇರಿ ದೂರವಾಣಿ ಸಂಖ್ಯೆ 08272-225811/ 225500 ಗೆ ಕರೆ ಮಾಡಿ ಆಡಳಿತ ಶಾಖೆಯನ್ನು ಸಂಪರ್ಕಿಸಬಹುದು ಎಂದು ಆಯ್ಕೆ ಮತ್ತು ನೇರನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಅವರು ತಿಳಿಸಿದ್ದಾರೆ.
ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ರಾಜಕೀಯ ಸಮಾವೇಶವಾಗಿದ್ದು ದುರದೃಷ್ಟಕರ: ಛಲವಾದಿ ನಾರಾಯಣಸ್ವಾಮಿ
Watch Video: ನಟ ಅಲ್ಲು ಅರ್ಜುನ್ ಮನೆ ಮುಂದೆ ಹೈಡ್ರಾಮಾ: ಸ್ಥಳದಲ್ಲಿ ಬಿಗುವಿನ ವಾತಾವರಣ | Actor Allu Arjun