ಬೆಂಗಳೂರು : ದೇಶದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಬೆಂಗಳೂರಿನಲ್ಲಿ ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಾಫ್ಟ್ ವೇರ್ ಎಂಜಿನಿಯರ್ ಗೆ 11 ಕೋಟಿ ರೂ. ವಂಚನೆ ಮಾಡಲಾಗಿದೆ.
ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಎಂದು ಕರೆ ಮಾಡಿ ಮುಂಬೈನ ಕೊಲಾಬಾದಲ್ಲಿ ನಿಮ್ಮ ಮೇಲೆ ಪ್ರಕರಣವೊಂದು ದಾಖಲಾಗಿದೆ. ನಿಮ್ಮ ಆಧಾರ್ ಕಾರ್ಡ್ ಬಳಸಿಕೊಂಡು ಹಣ ವರ್ಗಾವಣೆ ಆಗಿದೆ. 6 ಕೋಟಿ ರೂ.ವಂಚನೆ ಆಗಿದೆ ಎಂದು ಸಾಫ್ಟ್ ವೇರ್ ಎಂಜಿನಿಯರ್ ವಿಜಯ್ ಕುಮಾರ್ ಗೆ ಬೆದರಿಸಿದ್ದಾರೆ.
ವಿಡಿಯೋ ಕಾಲ್ ಮಾಡಿದ ವಂಚಕರು ನಿಮ್ಮನ್ನು ಪ್ರಕರಣದಲ್ಲಿ ಬಂಧಿಸುವುದಾಗಿ ಬೆದರಿಕೆ ಹಾಕಿದ್ದಾರೆ. ಬಳಿಕ 1 ತಿಂಗಳ ಕಾಲ ಮನೆಯಲ್ಲಿ ಇರದಂತೆ ಹೇಳಿದ್ದಾರೆ. ಅದರಂತೆ ಕೇಳಿದ ವಿಜಯ್ ಕುಮಾರ್ ಹಂತ ಹಂತವಾಗಿ ಬರೋಬ್ಬರಿ 11 ಕೋಟಿ ರೂ. ಸೈಬರ್ ವಂಚಕರ ಖಾತೆಗೆ ವರ್ಗಾವಣೆ ಮಾಡಿದ್ದಾರೆ.
ಯಲಹಂಕದಲ್ಲಿದ್ದ ವಿಜಯ್ ಕುಮಾರ್, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದ್ದರು. ಹೀಗಾಗಿ ಷೇರುಗಳನ್ನು ಮಾರಾಟ ಮಾಡಿಸಿ 11 ಕೋಟಿರೂ.ಗಳನ್ನು ಸೈಬರ್ ವಂಚಕರು ದೋಚಿದ್ದಾರೆ.