ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಇಂದು ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಮಿನಿ ಲಾರಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಕಡಬಗಟ್ಟಿ ಗ್ರಾಮದ ಬಳಿ ಮಿನಿ ಲಾರಿಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶಿರಸಂಗಿ ಗ್ರಾಮದ ಹನುಮಂತ ಮಲ್ಲಾಡದ (45), ಮಹಾಂತೇಶ್ ಚೌವ್ಹಾಣ್ (40) ಹಾಗೂ ಮಹಾದೇವ ಹಾಲೋಳ್ಳಿ (42) ಎಂದು ಗುರುತಿಸಲಾಗಿದೆ.
ಧಾರವಾಡ ಕಡೆಯಿಂದ ಗೋವಾಗೆ ಹೊರಟ್ಟಿದ್ದ ಮಿನಿಲಾರಿ ಹಾಗೂ ಗೋವಾದಿಂದ ಚಿತ್ರದುರ್ಗಕ್ಕೆ ಹೊರಟ್ಟಿದ್ದ ಲಾರಿ ಡಿಕ್ಕಿಯಾಗಿದ್ದು, ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅಳ್ನಾವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.