ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಬಳಸಿದ್ದ ಅವಾಚ್ಯ ಶಬ್ದದ ಕುರಿತು ಪ್ರಧಾನಿ ನರೇಂದ್ರ ಮೋದಿಗೂ ದೂರು ನೀಡುವೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪರಿಷತ್ ನಲ್ಲಿ ಬಿಜೆಪಿ ಎಂಎಲ್ ಸಿ ಸಿ.ಟಿ. ರವಿ ಬಳಸಿದ್ದಾರೆ ಎನ್ನಲಾದ ಅವಾಚ್ಯ ಪದ ಬಳಕೆಯ ವಿಡಿಯೋ ಸಾಕ್ಷ್ಯವನ್ನು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬಿಡುಗಡೆ ಮಾಡಿದ್ದಾರೆ.
ಡಿಸೆಂಬರ್ 19 ರಂದು ಪರಿಷತ್ ನಲ್ಲಿ ಸಿ.ಟಿ. ರವಿ ಅವರು ಬಳಸಿದ್ದಾರೆ ಎನ್ನಲಾದ ಅವಾಚ್ಯ ಪದದ ವಿಡಿಯೋ ಬಿಡುಗಡೆ ಮಾಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಈ ಬಗ್ಗೆ ಸಭಾಪತಿಗಳಿಗೆ ಮತ್ತೊಮ್ಮೆ ದೂರು ನೀಡುತ್ತೇನೆ. ಪ್ರಧಾನಿ ನರೇಂದ್ರ ಮೋದಿಗೆ ದೂರು ನೀಡುವೆ ಎಂದು ಹೇಳಿದ್ದಾರೆ.
ಈ ಬಗ್ಗೆ ತನಿಖೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆಯುತ್ತೇನೆ. ಸಿ.ಟಿ. ರವಿ ಅವರನ್ನು ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅವರು ಇಡೀ ಮಹಿಳಾ ಕುಲಕ್ಕೆ ಅವಮಾನ ಮಾಡಿದ್ದಾರೆ. ಸಿ.ಟಿ. ರವಿ ವಿರುದ್ಧ ನನ್ನ ಹೋರಾಟ ಮುಂದುವರೆಯಲಿದೆ ಎಂದು ತಿಳಿಸಿದ್ದಾರೆ.