ಬಾಗಲಕೋಟೆ : ಅಬಕಾರಿ ಸಚಿವ ಆರ್ ಬಿ ತಿಮ್ಮಾಪುರ್ ಅವರ ಕ್ಷೇತ್ರದಲ್ಲಿ ಇದೀಗ ಅಕ್ರಮ ಮದ್ಯ ಮಾರಾಟವನ್ನು ಪ್ರಶ್ನಿಸಿದ ವ್ಯಕ್ತಿಯನ್ನು ಭೀಕರವಾಗಿ ಕೊಲೆ ಮಾಡಲಾಗಿದೆ. ಹೌದು ಅಕ್ರಮ ಮದ್ಯ ಮಾರಾಟವನ್ನು ಪ್ರಶ್ನಿಸಿದ ವ್ಯಕ್ತಿಯ ಮೇಲೆ ದುಷ್ಕರ್ಮಿಗಳು ಕಟ್ಟಿಗೆಯಿಂದ ಹಲ್ಲೆ ಮಾಡಿದ್ದು ಅಲ್ಲದೆ, ವ್ಯಕ್ತಿಗೆ ಕರೆಂಟ್ ಶಾಕ್ ನೀಡಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಗ್ರಾಮದಲ್ಲಿ ನಡೆದಿದೆ.
ಹೌದು ಅಕ್ರಮ ಮದ್ಯ ಮಾರಾಟ ಪ್ರಶ್ನಿಸಿದಕ್ಕೆ ಭೀಕರ ಕೊಲೆಯಾಗಿದ್ದು, ಈ ಒಂದು ಕೊಲೆ ಪ್ರಕರಣದಲ್ಲಿ ಪೊಲೀಸರು ಐವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರು ಪೊಲೀಸ್ ಠಾಣೆಯ ಪೊಲೀಸರು, ಹನುಮಂತ ನೀಲರ್, ಪತ್ನಿ ಶೈಲ ನೀಲರ್, ಪರ್ವತಗೌಡ ಮುದಿಗೌಡ್ರ, ಪುಟ್ಟಪ್ಪ ಮುದಿಗೌಡ್ರ ಹಾಗೂ ಸಿದ್ದಪ್ಪ ನೀಲಗೌಡ್ರ ಎಂಬ ಆರೋಪಿಗಳನ್ನ ಕೆರೂರು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ರೆಡ್ಡಿರತಿಮ್ಮಾಪುರದಲ್ಲಿ ವೆಂಕರೆಡ್ಡಿ ಶೇಷಪ್ಪನವರ ಮೇಲೆ ಹಲ್ಲೆ ಮಾಡಿದ್ದರು ವೆಂಕರೆಡ್ಡಿ (40) ಮೇಲೆ ಕಟ್ಟಿಗೆಯಿಂದ ಹಲ್ಲೆ ನಡೆಸಿದ್ದು ಅಲ್ಲದೇ, ಕರೆಂಟ್ ಶಾಕ್ ನೀಡಿದ್ದರು. ಹನುಮಂತ ನೀಲರ್ ಮನೆಯಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡಲಾಗುತ್ತಿತ್ತು. ಮದ್ಯ ಸೇವಿಸಿ ವೆಂಕಟರೆಡ್ಡಿ ಮನೆಯ ಮುಂದೆ ಪ್ಯಾಕೆಟ್ ಬಿಸಾಡಿ ಹೋಗುತ್ತಿದ್ದರು.ಕುಡಿದ ಮಲಿನಲ್ಲಿ ಕೆಲವರು ವೆಂಕರೆಡ್ಡಿ ಮನೆ ಮುಂದೆ ಜಗಳವಾಡುತ್ತಿದ್ದರು.
ಹೀಗಾಗಿ ನಮ್ಮ ಮನೆಯ ಬಳಿ ಮದ್ಯ ಮಾರಬೇಡಿ ಎಂದು ವೆಂಕಟರೆಡ್ಡಿ ಹೇಳಿದ್ದ. ಇದರಿಂದ ಕೋಪಗೊಂಡ ಹನುಮಂತ್ ನೀಲರ್ ಹಾಗೂ ಇತರೆ ಆರೋಪಿಗಳು ಡಿಸೆಂಬರ್ 21ರಂದು ವೆಂಕರೆಡ್ಡಿ ಮೇಲೆ ಹಲ್ಲೆ ನಡೆಸಿದ್ದು ಅಲ್ಲದೆ ಕರೆಂಟ್ ಶಾಕ್ ನೀಡಿದ್ದರು. ಗಾಯಾಳು ವೆಂಕರೆಡ್ಡಿಯನ್ನು ಬಾಗಲಕೋಟೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಆದರೆ ಇಂದು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಸದ್ಯ ವೆಂಕಟರೆಡ್ಡಿ ಕೊಲೆ ಪ್ರಕರಣದಲ್ಲಿ ಪೊಲೀಸರು ಐವರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ.