ಬೆಂಗಳೂರು : ಬಳ್ಳಾರಿ, ರಾಯಚೂರು, ಬೆಳಗಾವಿಯ ಬಳಿಕ ಇದೀಗ ಬೆಂಗಳೂರಿನಲ್ಲಿಯೂ ಬಾಣಂತಿಯೊಬ್ಬರ ಸಾವಾಗಿದೆ. ಸಾವಾಗಿದ್ದು ಇದರ ಬೆನ್ನಲ್ಲೇ, ಇದೀಗ ಮತ್ತೊಂದು ಬಾಣಂತಿಯ ಸಾವಾಗಿದೆ. ಇಂದು ಬೆಳಿಗ್ಗೆ ತಾನೇ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದಾರೆ. ಆದರೆ ಇದೀಗ ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿಯು ಸಾವನ್ನಪ್ಪಿದ್ದಾಳೆ. ಬಾಣಂತಿಯ ಸಾವಿಗೆ ವೈದ್ಯರ ನಿರ್ಲಕ್ಷವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.
ಹೌದು ಬೆಂಗಳೂರಿನಲ್ಲಿ ಇದೀಗ ಮತ್ತೊರ್ವ ಬಾಣಂತಿ ಸಾವಾಗಿದೆ.ಕೆ ಸಿ ಜನರಲ್ ಆಸ್ಪತ್ರೆಯ ವೈದ್ಯರ ವಿರುದ್ಧ ಇದೀಗ ನಿರ್ಲಕ್ಷ ಆರೋಪ ಕೇಳಿ ಬಂದಿದೆ. ವೈದ್ಯರ ನಿರ್ಲಕ್ಷವೇ ಬಾಣಂತಿಯ ಸಾವಿಗೆ ಕಾರಣ ಎಂದು ಗಂಭೀರವಾದ ಆರೋಪ ಮಾಡುತ್ತಿದ್ದಾರೆ. ನಿನ್ನೆ ಕೇಸಿ ಜನರಲ್ ಆಸ್ಪತ್ರೆಗೆ ವಿನೂತಿ (32) ದಾಖಲಾಗಿದ್ದರು. ನಿನ್ನೆ ಸಂಜೆ ಮಗುವಿಗೆ ವಿನುತಿ ಜನ್ಮ ನೀಡಿದ್ದಾಳೆ.ಬಳಿಕ ವಾಣಿ ವಿಲಾಸ್ ಆಸ್ಪತ್ರೆಗೆ ವಿನುತಿಯನ್ನು ದಾಖಲಿಸಲಾಗಿತ್ತು. ಇಂದು ವಾಣಿವಿಲಾಸ ಆಸ್ಪತ್ರೆಯಲ್ಲಿ ವಿನಂತಿ ಸಾವನ್ನಪ್ಪಿದ್ದಾಳೆ.
ಇದಕ್ಕೂ ಮುನ್ನ ಬೆಂಗಳೂರಿನ ನಾಗರಬಾವಿಯ ಖಾಸಗಿ ಆಸ್ಪತ್ರೆಯಲ್ಲಿ ಬಾಣಂತಿ ಅನುಷಾ ಮೃತಪಟ್ಟಿದ್ದರು. ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಗರ್ಜೆ ಗ್ರಾಮದ ನಿವಾಸಿ ಅನುಷಾಗೆ ತರೀಕೆರೆಯ ರಾಜ್ ನರ್ಸಿಂಗ್ ಹೋಂನಲ್ಲಿ ಸಹಜ ಹೆರಿಗೆ ಆಗಿತ್ತು. ಡೆಲಿವರಿಗೂ ಮುನ್ನ ಸ್ಕ್ಯಾನಿಂಗ್ ಮಾಡಿದಾಗ ಕಲ್ಲು ಇದೆ ಎಂದು ವೈದ್ಯರು ತಿಳಿಸಿದ್ದರು. ಅದೇ ಸ್ಕ್ಯಾನಿಂಗ್ ವರದಿ ಆಧಾರದ ಮೇಲೆ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಡೆಲಿವರಿಯಾದ ಒಂದೇ ತಿಂಗಳಿಗೆ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಅನುಷಾಗೆ ಆಪರೇಷನ್ ಮಾಡಲಾಗಿತ್ತು.
ಶಸ್ತ್ರಚಿಕಿತ್ಸೆ ಆದ ನಂತರ ಮನೆಗೆ ತೆರಳಿದಾಗ ಬಾಣಂತಿಯ ಕೈ ಕಾಲಿನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ಆಕೆಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಪರಿಶೀಲಿಸಿದ ವೈದ್ಯರು, ಆರೋಗ್ಯ ಸಹಜವಾಗಿದೆ. ಏನೂ ಸಮಸ್ಯೆ ಇಲ್ಲ ಎಂದಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ. ಹೀಗಾಗಿ ಮತ್ತೆ ಸ್ಥಳೀಯ ಆಸ್ಪತ್ರೆಗೆ ಅನುಷಾರನ್ನು ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರು, ಅನುಷಾಗೆ ಜಾಂಡಿಸ್ ಇದೆ ಎಂದಿದ್ದರು. ಸ್ಥಳೀಯ ಆಸ್ಪತ್ರೆ ವೈದ್ಯರ ಸಲಹೆಯಂತೆ ಅನುಷಾರನ್ನು ಕುಟುಂಬಸ್ಥರು ಬೆಂಗಳೂರಿಗೆ ಕರೆತಂದು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅಲ್ಲಿ ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.