ಮೈಸೂರು : ಮೈಸೂರಿನಲ್ಲಿ ಘೋರ ದುರಂತ ಒಂದು ಸಂಭವಿಸಿದ್ದು, ಮನೆಯಲ್ಲಿ ತಡರಾತ್ರಿ ವಿದ್ಯುತ್ ಅವಘಡ ಸಂಭವಿಸಿದ್ದರಿಂದ, ವ್ಯಕ್ತಿಯೋರ್ವ ಸಾವನ್ನಪ್ಪಿದ್ದು, ಅದೃಷ್ಟವಶಾತ್ ಆತನ ಪತ್ನಿ ಹಾಗೂ ತಾಯಿ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಮೈಸೂರು ಜಿಲ್ಲೆ ಟಿ ನರಸೀಪುರ ತಾಲ್ಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ನಡೆದಿದೆ.
ಹೌದು ಈ ಒಂದು ವಿದ್ಯುತ್ ಅವಘಡದಲ್ಲಿ ಲೋಕೇಶ್ (33) ಎನ್ನುವ ವ್ಯಕ್ತಿ ಸಾವನ್ನಪ್ಪಿದ್ದರೆ. ತಡರಾತ್ರಿ ಲೋಕೇಶ್ ಪತ್ನಿ ಹಾಗೂ ತಾಯಿಗೆ ವಿದ್ಯುತ್ ತಗುಲಿದೆ. ಈ ಸಂದರ್ಭದಲ್ಲಿ ತಾಯಿ ಹಾಗೂ ಪತ್ನಿಯನ್ನು ರಕ್ಷಿಸಲು ಲೋಕೇಶ್ ಮುಂದಾಗಿದ್ದಾರೆ.ಈ ವೇಳೆ ವಿದ್ಯುತ್ ಶಾಕ್ ನಿಂದ ಲೋಕೇಶ್ ಮೃತಪಟ್ಟಿದ್ದಾರೆ.
ಲೋಕೇಶ್ ಪತ್ನಿ ಕಾವ್ಯ ಹಾಗೂ ತಾಯಿ ನಾಗಮ್ಮಗೆ ಗಂಭೀರವಾಗಿ ಗಾಯವಾಗಿದ್ದು, ತಕ್ಷಣ ಅವರನ್ನ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಚೆಸ್ಕಾಂ ಹಾಗೂ ಪೊಲೀಸರ ಭೇಟಿ ಪರಿಶೀಲನೆ ನಡೆಸಿದ್ದಾರೆ. ಟಿ ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.